ಮಂಗಳೂರು: ನಗರದ ಜೈಲಿನೊಳಗಡೆ ಮೊಬೈಲ್ ಹಾಗೂ ಸಿಗರೆಟ್ ಎಸೆಯಲು ಯತ್ನಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪಂಜಿಮೊಗರು ನಿವಾಸಿ ಪ್ರಜ್ವಲ್(21) ಎಂಬಾತ ಬಂಧಿತ ಆರೋಪಿ.
ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆರೋಪಿ ಪ್ರಜ್ವಲ್ ಜೈಲು ಸಮೀಪದ ಕೆನರಾ ಕಾಲೇಜಿನ ಮುಖ್ಯದ್ವಾರದ ಒಳಗೆ ಪ್ರವೇಶಿಸಿದ್ದಾನೆ. ಅಲ್ಲಿಂದ ಕಾರಾಗೃಹದೊಳಗೆ ಕೆಂಪು ಬಣ್ಣದ ಗಮ್‌ಟೇಪ್‌ನಿಂದ ಸುತ್ತಿದ ಪೊಟ್ಟಣಗಳನ್ನು ಎಸೆಯಲು ಪ್ರಯತ್ನಿಸುತ್ತಿದ್ದ. ಇದನ್ನು ಗಮನಿಸಿದ ಗಸ್ತು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎ- ಸಿಬ್ಬಂದಿ ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಪೊಟ್ಟಣದೊಳಗೆ ಎರಡು ಕೀ ಪ್ಯಾಡ್ ಮೊಬೈಲ್ ಮತ್ತು ಎರಡು ಪ್ಯಾಕೆಟ್ ಸಿಗರೇಟ್ ಇತ್ತು. ಪ್ರಜ್ವಲ್ ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿಸಲ್ಪಟ್ಟು ಕಾರಾಗೃಹದಲ್ಲಿದ್ದ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.