ಮಂಗಳೂರು : ಇಡೀ ದೇಶವನ್ನೇ ಬೆಚ್ಚಿಬಿಳಿಸಿದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತಕ್ಕೆ 14 ವರ್ಷ ಸಂದಿದೆ. ಈ ದುರಂತದಲ್ಲಿ ಮಡಿದವರಿಗೆ ದಕ್ಷಿಣಕನ್ನಡ ಜಿಲ್ಲಾಡಳಿತ ಶೃದ್ದಾಂಜಲಿ ಸಲ್ಲಿಸಿತು.
ವಿಮಾನ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಗುರುತು ಹಿಡಿಯಲಾಗದ 12 ಮಂದಿಯ ಮೃತದೇಹಗಳನ್ನು ಕುಳೂರಿನ ನದಿ ಕಿನಾರೆಯಲ್ಲಿ ಸಮಾಧಿ ಮಾಡಲಾಗಿತ್ತು. ಅದೇ ಜಾಗದಲ್ಲಿ ದುರಂತದಲ್ಲಿ ಮಡಿದವರ ನೆನಪಿಗಾಗಿ ಪಾರ್ಕ್ ನಿರ್ಮಾಣ ಮಾಡಲಾಗಿದ್ದು. ವಿಮಾನ ದುರಂತದಲ್ಲಿ ಮಡಿದ 158 ಮಂದಿಯ ನೆನಪಿಗಾಗಿ ಕೂಳೂರು ಸೇತುವೆಯಿಂದ ತಣ್ಣೀರು ಬಾವಿ ರಸ್ತೆಗೆ ತಿರುಗುವಲ್ಲಿ ನಿರ್ಮಿಸಲಾದ ಪಾರ್ಕ್‌ನಲ್ಲಿ ಪ್ರತಿ ವರ್ಷ ಜಿಲ್ಲಾಡಳಿತದ ವತಿಯಿಂದ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಇಂದು ಜಿಲ್ಲಾಧಿಕಾರಿ ಹಾಗೂ ವಿಮಾನ ದುರಂತದಲ್ಲಿ ಮಡಿದವರ ಕುಟುಂಬದವರು ಶೃದ್ದಾಂಜಲಿ ಸಲ್ಲಿಸಿದರು.
ಮೇ 22ರಂದು ಬೆಳಗ್ಗೆ 6:20ಕ್ಕೆ ದುಬೈನಿಂದ ಆಗಮಿಸಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಹಂತದಲ್ಲಿ ಅಪಘಾತಕ್ಕೀಡಾಗಿ ವಿಮಾನದಲ್ಲಿದ್ದ 166 ಮಂದಿಯ ಪೈಕಿ 158 ಮಂದಿ ಮೃತಪಟ್ಟಿದ್ದರು. 8 ಮಂದಿ ಬದುಕುಳಿದಿದ್ದರು.