Facebook Twitter Instagram
    Monday, June 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ರನ್ನರ್ಸ್ ಕ್ಲಬ್‌ನಿಂದ ನ.10ರ ಬೆಳಗ್ಗೆ 4-10ರವರೆಗೆ ಮ್ಯಾರಥಾನ್ – ವಾಹನ ಸಂಚಾರ ವ್ಯತ್ಯಯ
    ಇತ್ತೀಚಿನ ಸುದ್ದಿ

    ಮಂಗಳೂರು ರನ್ನರ್ಸ್ ಕ್ಲಬ್‌ನಿಂದ ನ.10ರ ಬೆಳಗ್ಗೆ 4-10ರವರೆಗೆ ಮ್ಯಾರಥಾನ್ – ವಾಹನ ಸಂಚಾರ ವ್ಯತ್ಯಯ

    November 7, 2024
    Share

    ಮಂಗಳೂರು : ಮಂಗಳೂರು ರನ್ನರ್ಸ್ ಕ್ಲಬ್ ವತಿಯಿಂದ ನವೆಂಬರ್ 10ರ ಬೆಳಗ್ಗೆ 4 ರಿಂದ 10ರವರೆಗೆ “Niveus Mangaluru Marathon 2024” ನಡೆಯಲಿದೆ. ಈ ಓಟದಲ್ಲಿ 5000ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯವಾಗಲಿದೆ. Marathon ಮಂಗಳಾ ಕ್ರೀಡಾಂಗಣದಿಂದ ಆರಂಭವಾಗಿ ನಾರಾಯಣ ಗುರು ವೃತ್ತ (ಲೇಡಿಹಿಲ್), ಚಿಲಿಂಬಿ, ಉರ್ವ ಸ್ಟೋರ್ ಕೊಟ್ಟಾರ ಚೌಕಿ, ಕೋಡಿಕಲ್ ಕ್ರಾಸ್, ಕೂಳೂರು, ಕೆ.ಐ.ಒ.ಸಿ.ಎಲ್ ಜಂಕ್ಷನ್ ಮುಖಾಂತರ ಎನ್.ಎಂ.ಪಿ.ಎ ಸರ್ವಿಸ್ ರಸ್ತೆಯಲ್ಲಿ ಸಾಗಿ ಡಿಕ್ಸಿ ಕ್ರಾಸ್‌ನಲ್ಲಿ ಪಣಂಬೂರು ಬೀಚ್ ರಸ್ತೆಗೆ ತಿರುಗಿ ವಾಪಾಸ್ ಡಿಕ್ಸಿ ಕ್ರಾಸ್, ಕೆ.ಐ.ಓ.ಸಿ.ಎಲ್ ಜಂಕ್ಷನ್‌ಗೆ ಆಗಮಿಸಿ ತಣ್ಣೀರುಬಾವಿ ಬೀಚ್‌ವರೆಗೆ ಹೋಗಿ ವಾಪಾಸ್ಸು ಕೊಟ್ಟಾರಚೌಕಿ, ಲೇಡಿಹಿಲ್ ಮುಖಾಂತರ ಮಂಗಳಾ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ. ಈ ಸಂಬಂಧ ನಗರದಲ್ಲಿ ಮಾಡಲಾಗಿರುವ ವಾಹನ ಸಂಚಾರ – ನಿಲುಗಡೆ ನಿಷೇಧ, ಮಾರ್ಪಾಡು ವಿವರ ಈ ಕೆಳಗಿನಂತಿದೆ. ಮಣ್ಣಗುಡ್ಡೆಯಿಂದ ನಾರಾಯಣಗುರು ವೃತ್ತದವರೆಗೆ, ಉರ್ವ ಮಾರ್ಕೆಟ್‌ನಿಂದ ನಾರಾಯಣಗುರು ವೃತ್ತದರೆಗೆ, ಕೆ.ಎಸ್.ಆರ್.ಟಿ.ಸಿಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣಗುರು ವೃತ್ತದರೆಗೆ, ನಾರಾಯಣಗುರು ವೃತ್ತದಿಂದ ಕೊಟ್ಟಾರಚೌಕಿವರೆಗೆ, ಕೊಟ್ಟಾರ ಚೌಕಿಯಿಂದ ಕೋಡಿಕಲ್ ಕ್ರಾಸ್ ಕಡೆಗೆ ಸಾಗುವ ಸರ್ವಿಸ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನ ಸಂಚಾರವನ್ನು ಹಾಗೂ ನಿಲುಗಡೆಯನ್ನು ನಿಷೇಧಿಸಿದೆ. ಕೋಡಿಕಲ್ ಕ್ರಾಸ್‌ನಿಂದ ಕೂಳೂರು ಸೇತುವೆವರೆಗೆ, ತಣ್ಣೀರುಬಾವಿ ಬೀಚ್ ರಸ್ತೆಯಿಂದ ತಣ್ಣೀರುಬಾವಿ ಬೀಚ್ ವರೆಗೆ Marathon ಓಟ ಸಾಗುವ ಮಾರ್ಗದಲ್ಲಿನ ಎಡ ಭಾಗದಲ್ಲಿರುವ ಎಲ್ಲಾ ಅಡ್ಡ ರಸ್ತೆಗಳಿಂದ ವಾಹನಗಳು ಮಾರಥಾನ್ ಓಟ ಸಾಗುವ ಮುಖ್ಯ ರಸ್ತೆಗೆ ಬರುವುದನ್ನು ನಿಷೇಧಿಸಿದೆ. ವಾಹನ ಸಂಚಾರಕ್ಕೆ ಮಾಡಿರುವ ಬದಲಿ ಮಾರ್ಗಗಳ ವಿವರ:- 1. ಪಿ.ವಿ.ಎಸ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ಕಡೆಗೆ ಸಂಚರಿಸುವ ವಾಹನಗಳು ಲಾಲ್ ಬಾಗ್ – ಕೆ.ಎಸ್.ಆರ್.ಟಿ.ಸಿ ಮೂಲಕ ಸಂಚರಿಸುವುದು. 2. ಕುದ್ರೋಳಿ ಮಣ್ಣಗುಡ್ಡೆ ಮತ್ತು ಉರ್ವ ಮಾರ್ಕೆಟ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಸಂಚರಿಸುವ ವಾಹನಗಳು ಮಣ್ಣಗುಡ್ಡೆ – ಬಲ್ಲಾಳ್ ಬಾಗ್ / ನೆಹರೂ ಅವಿನ್ಯೂ ರಸ್ತೆ – ಲಾಲ್ ಬಾಗ್ – ಕೆ.ಎಸ್.ಆರ್.ಟಿ.ಸಿ ಮೂಲಕ ಸಂಚರಿಸುವುದು. 3. ಕೆ.ಎಸ್.ಆರ್.ಟಿ.ಸಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಬಿಜೈ ಕಾಪಿಕಾಡ್ ಕಡೆಯಿಂದ ಕುಂಟಿಕಾನ ಮುಖೇನ ಸಂಚರಿಸುವುದು. 4.ಕೆ.ಪಿ.ಟಿ/ಕುಂಟಿಕಾನ ಕಡೆಯಿಂದ ಉಡುಪಿ ಕಡೆಗೆ ಸಾಗುವ ವಾಹನಗಳು ಕೋಡಿಕಲ್ ಕ್ರಾಸ್ ಫ್ಲೈ – ಓವರ್ ಬಳಿ ಬಲಕ್ಕೆ ತಿರುಗಿ ಕೂಳೂರು ಕೊಟ್ಟಾರ ಕ್ರಾಸ್ ಏಕಮುಖ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಕೂಳೂರು ಹಳೇ ಸೇತುವೆ ಬಳಿಯ ಪ್ಲೈ- ಓವರ್ ನ ಮುಕ್ತಾಯದಲ್ಲಿ ಎಡಕ್ಕೆ ತಿರುಗಿ ಕೂಳೂರು ಹೊಸ ಸೇತುವೆ ಮುಖೇನ ಕೆ.ಐ.ಓ.ಸಿ.ಎಲ್ ಮುಖಾಂತರ ಸಂಚರಿಸುವುದು. 5. ಕಾವೂರು-ಪಂಜಿಮೊಗರು ಕಡೆಯಿಂದ ಬರುವ ಎಲ್ಲಾ ವಾಹನಗಳು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಸರ್ವೀಸ್ ರಸ್ತೆಯ ಮುಖಾಂತರ ಉಡುಪಿ ಕಡೆಗೆ ಸಂಚರಿಸುವುದು. 6.ಆಶೋಕನಗರ, ಶೇಡಿಗುರಿ, ದಂಬೆಲ್, ಸುಲ್ತಾನ್ ಬತ್ತೇರಿಯಿಂದ ಬರುವ ವಾಹನಗಳು ಉರ್ವ ಮಾರ್ಕೆಟ್, ಮಣ್ಣಗುಡ್ಡೆ ಮುಖಾಂತರ ಸಂಚರಿಸುವುದು. ಸಾವಿರಾರು ಸಂಖ್ಯೆಯಲ್ಲಿ ಕ್ರೀಡಾ ಪಟುಗಳು, ಕ್ರೀಡಾಭಿಮಾನಿಗಳು ಭಾಗವಹಿಸುವ ಈ ಮ್ಯಾರಥಾನ್ ಓಟಕ್ಕೆ ಸಾರ್ವಜನಿಕರೆಲ್ಲರೂ ಸಹಕರಿಸಬೇಕಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ವಿನಂತಿ ಮಾಡಿದ್ದಾರೆ.

    Post Views: 279

    Related Posts

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಿಕಪ್ ಪಲ್ಟಿ; ಅಕ್ರಮ ಜಾನುವಾರು ಸಾಗಾಟ ಬಯಲು – ಇಬ್ಬರ ವಿರುದ್ಧ ಪ್ರಕರಣ ದಾಖಲು

    June 15, 2026

    ಮಾನಸಿಕ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಯುವಕನಿಗೆ ಹೊಸ ಬದುಕು; ಕುಟುಂಬದೊಂದಿಗೆ ಪುನರ್ಮಿಲನ

    June 15, 2026

    ಆರೋಪಿಯಿಂದಲೇ ಹಣಕ್ಕೆ ಬೇಡಿಕೆ ಇಟ್ಟ ಹೆಚ್‌ಎಎಲ್ ಪೊಲೀಸರು: ಪಿಎಸ್ಐ ಸೇರಿ ಮೂವರು ಎಸಿಬಿ ಬಲೆಗೆ

    June 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.