ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತ ಈ ಬಾರಿಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಸಲು ಸಜ್ಜಾಗಿದೆ. ಇದೀಗ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ಗೆ’ ದಿನಾಂಕ ನಿಗದಿಯಾಗಿದೆ.
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಮೂರನೇ ಆವೃತ್ತಿ ಯ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಇದೇ 2025ರ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ ಎಂದು ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ಗೌರವಾಧ್ಯಕ್ಷ ಗಿರೀಧರ್ ಶೆಟ್ಟಿ ತಿಳಿಸಿದ್ದಾರೆ.
ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3 ಜನವರಿ 18 ರಿಂದ 22ರವರೆಗೆ ನಡೆಯಲಿದೆ ಎನ್ನುವುದು ಖಚಿತವಾಗಿದೆ. ಪ್ರತಿದಿನ ಸಂಜೆ 4ರಿಂದ ರಾತ್ರಿ 10ರವರೆಗೆ ಕರಾವಳಿ ಉತ್ಸವ ಮೈದಾನದಿಂದ ನಾರಾಯಣ ಗುರು ವೃತ್ತ, ಮಣ್ಣಗುಡ್ಡ ಗುರ್ಜಿ ವೃತ್ತ, ಕೆನರಾ ಉರ್ವದವರೆಗೆ ಈ ಸ್ಟ್ರೀಟ್ ಫುಡ್ ಫಿಯೆಸ್ಟ್ ನಡೆಯಲಿದೆ. ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ್ ಸೀಸನ್ 3ರ ಸಿದ್ಧತೆ ಭರದಿಂದ ಸಾಗುತ್ತಿದ್ದು, ಆನ್ ಲೈನ್ ಮೂಲಕ ನೂರಕ್ಕೂ ಅಧಿಕ ಸಂಖ್ಯೆಯ ಆಹಾರ ಮಳಿಗೆಗಳು ಈಗಾಗಲೇ ನೋಂದಾಯಿಸಿಕೊಂಡಿವೆ.