Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ
    Uncategorized

    ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಮಂಗಳೂರು ದಸರಾಕ್ಕೆ ಚಾಲನೆ

    October 15, 2023
    Share

    ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾದ ಹಿನ್ನಲೆಯಲ್ಲಿ ನಗರದ ಶ್ರೀಕ್ಷೇತ್ರ‌ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ರವಿವಾರ ಬೆಳಗ್ಗೆ ನೆರವೇರಿತು. ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು.

    ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಈ ಬಾರಿ ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ವಿಶೇಷವಾಗಿದೆ. ಶಿಲಾಬಾಲಿಕೆಯರು, ವಿವಿಧ ದೇವರುಗಳ ಕಲಾಕೃತಿಗಳು ದರ್ಬಾರ್ ಮಂಟಪದ ಕಂಬಕಂಬಗಳಲ್ಲಿ ರಾರಾಜಿಸುತ್ತಿದ್ದಾರೆ. ಸಾಮಾನ್ಯ ನವದುರ್ಗೆಯರನ್ನು ಮಂಟಪದೊಳಗಡೆ ಪ್ರತಿಷ್ಠಾಪಿಸಲಾಗುತ್ತಿತ್ತು. ಆದರೆ ಈ ಬಾರಿ ಪ್ರತ್ಯೇಕ ಗುಡಿಗಳನ್ನು ನಿರ್ಮಿಸಿ ಅದರೊಳಗಡೆ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗಿದೆ. ಮಂಟಪದ ಮೇಲ್ಗಡೆ ಸ್ವಯಂಚಾಲಿತವಾಗಿ ತಿರುಗುವ ಮೇಲ್ಛಾವಣಿಯನ್ನು ಅತ್ಯಾಕರ್ಷಕವಾಗಿ ರಚಿಸಲಾಗಿದೆ. ದರ್ಬಾರ್ ಮಂಟಪ ಹೊಕ್ಕುವಂತೆಯೇ ಎಡಬಲ ಬದಿಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹಾಗೂ ಶ್ರೀ ಗೋಕರ್ಣನಾಥ ದೇವರ ಬೃಹತ್ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಸುಮಾರು 50 ಅಧಿಕ ಬೃಹತ್ ಗಾತ್ರದ ಕಂಬಗಳು, ಅದರ ಕೆತ್ತನೆಗಳು ಬೇಲೂರು – ಹಳೆಬೀಡು ದೇವಾಲಯ ಮಾದರಿಯನ್ನು ನೆನಪಿಸುತ್ತದೆ. ಎಲ್ಲೆಡೆ ಕಣ್ಣುಕೋರೈಸುವ ವಿದ್ಯುತ್ ದೀಪಾಲಂಕಾರದಲ್ಲಿ ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿದೆ. ಮುಲ್ಕಿಯ ಚಂದ್ರಶೇಖರ ಸುವರ್ಣ ಅವರ ಸುವರ್ಣ ಆರ್ಟ್ಸ್ ತಂಡ ಈ ದಸರಾ ಮಂಟಪವನ್ನು ನಿರ್ಮಾಣ ಮಾಡಿದೆ.

    Post Views: 244

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.