Facebook Twitter Instagram
    Tuesday, October 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ- ಇಬ್ಬರು ಅರೆಸ್ಟ್
    ಕರಾವಳಿ ಸುದ್ದಿ

    ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ- ಇಬ್ಬರು ಅರೆಸ್ಟ್

    February 25, 2025
    Share

    ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಯನ್ನುಮಾರಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಬಂಧಿಸಲಾಗಿದೆ.

    ಆರೋಪಿಗಳು ಗುಲ್ಬರ್ಗಾ ಜಿಲ್ಲೆ , ಉಮ್ಮರ್ ಕಾಲೊನಿ ಆಜಾದ್ ಪುರ ರೋಡ್ ಶೇಕ್ ಸಿಕಂದರ್(22), ಮಂಗಳೂರು ಕಾವೂರು ನಿವಾಸಿ ಮೊಹಮ್ಮದ್ ತೌಫೀಕ್(29), ಎಂದು ಗುರುತಿಸಲಾಗಿದೆ.ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಮುಂಬೈಯಲ್ಲಿ ಖರೀದಿಸಿಕೊಂಡು ಗುಲ್ಬರ್ಗ ಮೂಲಕ ಮಂಗಳೂರಿಗೆ ಸಾಗಾಟ ಮಾಡಿಕೊಂಡು ಮಂಗಳೂರು ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ ಕೂಳೂರು ಪರಿಸರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಆರೋಪಿಗಳು ಮಾರಾಟ ಮಾಡುತ್ತಿದ್ದರು. 1,15,000 ಮೌಲ್ಯದ 23 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 2 ಮೊಬೈಲ್ ಫೋನ್ ಗಳು, ಸುಝುಕಿ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,10,000 ಅಂದಾಜಿಸಲಾಗಿದೆ. .

    ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಶೇಕ್ ಸಿಕಂದರ್ ಎಂಬಾತನು ಮಾದಕ ವಸ್ತುವಾದ ಎಂಡಿಎಂಎ ನ್ನು ಮುಂಬೈಯಿಂದ ಖರೀದಿಸಿಕೊಂಡು ಗುಲ್ಬರ್ಗದಿಂದ ಬಸ್ಸಿನಲ್ಲಿ ಮಂಗಳೂರಿಗೆ ಬಂದು ಇನ್ನೋರ್ವ ಆರೋಪಿ ಮೊಹಮ್ಮದ್ ತೌಫೀಕ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದು, ಮೊಹಮ್ಮದ್ ತೌಫೀಕ್ ನು ಅಕ್ರಮ ಲಾಭ ಗಳಿಸುವ ಉದ್ದೇಶದಿಂದ ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿರುವುದಾಗಿದೆ. ಈ ಮಾದಕ ವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.ಇವರು ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿರುವುದಾಗಿದೆ. ಆರೋಪಿಗಳ ಪೈಕಿ ಶೇಖ್ ಸಿಕಂದರ್ ಎಂಬಾತನ ವಿರುದ್ಧ ಈ ಹಿಂದೆ ಗುಲ್ಬರ್ಗದ ರೋಜಾ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿದೆ.ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರಾದ ರಫೀಕ್ ಕೆ ಎಂ ರವರ ನೇತೃತ್ವದಲ್ಲಿ ಪಿಎಸ್ಐ ಶರಣಪ್ಪ ಭಂಡಾರಿ, ಎಎಸ್ಐ ಸುಜನ್ ಶೆಟ್ಟಿ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು. 

    Post Views: 175

    Related Posts

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ : ನೇಣು ಬಿಗಿದು ಮಹಿಳೆ ಆತ್ಮ*ಹ*ತ್ಯೆ!!

    October 26, 2026

    ಉಡುಪಿ: ಕೆರೆಯಲ್ಲಿ ಮುಳುಗಿ ಇಬ್ಬರು ಶಾಲಾ ವಿದ್ಯಾರ್ಥಿನಿಯರ ದಾರುಣ ಸಾವು

    October 26, 2026

    ಬೆಳ್ತಂಗಡಿ: ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಮಹಮ್ಮದ್ ಇಸಾಕ್ ಬಂಧನ

    October 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.