Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಜಾಗ್ವಾರ್ ವಿಮಾನಕ್ಕೆ ಮಂಗಳೂರಿನ ತನುಷ್ಕಾ ಪೈಲಟ್
    ಕರಾವಳಿ ಸುದ್ದಿ

    ಜಾಗ್ವಾರ್ ವಿಮಾನಕ್ಕೆ ಮಂಗಳೂರಿನ ತನುಷ್ಕಾ ಪೈಲಟ್

    February 25, 2025
    Share

    ಮಂಗಳೂರು: ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ಭಾರತೀಯ ವಾಯುಪಡೆಯ ಹೆಮ್ಮೆ ಹಾಗೂ ಯಶಸ್ವಿ ಯುದ್ಧವಿಮಾನಗಳ ಸಾಲಿನಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವ ಜಾಗ್ವಾರ್ ವಿಮಾನವನ್ನು ಮುನ್ನಡೆಸುವ ಅವಕಾಶವನ್ನು ಪಡೆದಿದ್ದಾರೆ.

    ಮಂಗಳೂರು ಮೂಲದ ಪ್ಲೆಯಿಂಗ್ ಆಫೀಸ‌ರ್ ತನುಷ್ಕಾ ಸಿಂಗ್ ಅವರಿಗೆ ಈ ಸದಾವಕಾಸ ದೊರಕಿದ್ದು, ಆಕೆ ಯುದ್ಧ ವಿಮಾನ ಸ್ಕ್ಯಾಡ್ರನ್‌ನಲ್ಲಿ ಪೈಲಟ್ ಆಗಿ ಆಯ್ಕೆಯಾಗಿದ್ದಾರೆ.
    ಜಾಗ್ವಾರ್ ಯುದ್ಧ ವಿಮಾನವನ್ನು ಇದುವರೆಗೆ ಮಹಿಳಾ ಪೈಲಟ್‌ಗಳು ಶಾಶ್ವತ ನೆಲೆಯಲ್ಲಿ ಮುನ್ನಡೆಸಿಲ್ಲ. ತನುಷ್ಕಾ ಮಿಲಿಟರಿ ಹಿನ್ನೆಲೆಯ ಕುಟುಂಬದವರು. ಅವರ ತಂದೆ, ಅಜ್ಜ ಎಲ್ಲರೂ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಮೂಲತಃ ಉತ್ತರ ಪ್ರದೇಶದವರಾದರೂ 2007ರಿಂದ ತನುಷ್ಕಾ ಮಂಗಳೂರಿನಲ್ಲಿಯೇ ನೆಲೆಸಿದ್ದಾರೆ. ಹಾಗಾಗಿ “ನಾನು ಕುಡ್ಲದವಳು” ಎಂದು ಹೆಮ್ಮೆಯಿಂದ ಹೇಳುತ್ತಾಳೆ. ತಂದೆ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ಅಜಯ್ ಪ್ರತಾಪ್ ಸಿಂಗ್ ಅವರು ಪ್ರಸ್ತುತ ಎಂಆರ್‌ಪಿಎಲ್ ಸಂಸ್ಥೆಯ ಎಚ್‌ಎಸ್‌ಇ ವಿಭಾಗದಲ್ಲಿ ಜನರಲ್ ಮ್ಯಾನೇಜರ್ ಆಗಿದ್ದಾರೆ.
    ತನುಷ್ಕಾ ಸುರತ್ಕಲ್ ಡಿಪಿಎಸ್ ಎಂಆರ್‌ಪಿಎಲ್ ಶಾಲೆ ಯಲ್ಲಿ ಎಸೆಸೆಲ್ಸಿ, ಮಂಗಳೂರಿನ ಶಾರದಾ ಪಿಯು ಕಾಲೇಜಿನಲ್ಲಿ ಪದವಿ ಪೂರ್ವ ವಿಜ್ಞಾನ ಶಿಕ್ಷಣದ ಬಳಿಕ ಮಣಿಪಾಲ ಎಂಐಟಿಯಲ್ಲಿ ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 2022ರಲ್ಲಿ ಬಿ.ಟೆಕ್. ಪದವಿ ಗಳಿಸಿದ್ದಾಳೆ. “ಚಿಕ್ಕಂದಿನಿಂದಲೂ ಸೇನೆಗೆ ಸೇರ ಬೇಕೆಂಬ ಹಂಬಲ ಇತ್ತು. ಆದರೆ ವಾಯುಪಡೆಗೆ ಸೇರುತ್ತೇನೆ, ಅದರಲ್ಲೂ ಸಮರ ವಿಮಾನದ ಪೈಲಟ್ ಆಗು ತ್ತೇನೆ ಎಂದು ಯಾವತ್ತೂ ಯೋಚಿಸಿರಲಿಲ್ಲ” ಎನ್ನುತ್ತಾರೆ ತನುಷ್ಕಾ.
    ಇದೀಗ ತನುಷ್ಕಾ ಸೇನಾ ವಿಮಾನದ ಪೈಲಟ್ ಆಗಿ ಆಯ್ಕೆಯಾಗಿರುವುದು ಮಂಗಳೂರಿನವರಿಗೆ ಖುಷಿ ಹಾಗೂ ಹೆಮ್ಮೆಯ ವಿಚಾರವಾಗಿದೆ.

    Post Views: 310

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.