Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಒಂದು ಸೆಲ್ಫಿಗೆ ಸಸ್ಪೆಂಡ್ ಆದ ಉರ್ವ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್
    ಇತ್ತೀಚಿನ ಸುದ್ದಿ

    ಒಂದು ಸೆಲ್ಫಿಗೆ ಸಸ್ಪೆಂಡ್ ಆದ ಉರ್ವ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್

    February 26, 2025
    Share

    ಮಂಗಳೂರು : ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ತಿರುಗಾಟ ನಡೆಸಿದ್ದಲ್ಲದೆ ಅವನ ಜೊತೆ ಸೆಲ್ಫಿ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಉರ್ವ ಠಾಣೆಯ ಪೊಲೀಸ್ ಹೆಡ್‌ ಕಾನ್‌ಸ್ಟೆಬಲ್ ಪೀಟರ್ ಡಿಸೋಜ ಅವರನ್ನು ಅಮಾನತು ಮಾಡಿ ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗ್ರವಾಲ್ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಈ ಘಟನೆ ಸಂಬಂಧ ಉರ್ವ ಠಾಣೆಯ ಇನ್‌ಸ್ಪೆಕ್ಟರ್ (ಭಾರತಿ) ಅವರ ವಿರುದ್ಧ ಇಲಾಖಾ ಶಿಸ್ತು ಕ್ರಮಕೈಗೊಂಡಿದ್ದಾರೆ.

    ಅಮೆಜಾನ್ ಕಂಪನಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಆರೋಪಿಗಳನ್ನು ಕಸ್ಟಡಿಗೆ ಪಡೆದ ಸಂದರ್ಭದಲ್ಲಿ ಪೊಲೀಸರು ರಾಜಸ್ಥಾನಕ್ಕೆ ತೆರಳಿದಾಗ ಸೆಲ್ಪಿ ತೆಗೆದುಕೊಂಡಿದ್ದರು ಎನ್ನಲಾಗಿದೆ. ಪ್ರಕರಣದ ತನಿಖೆಯ ಹೊಣೆಯನ್ನು ಉರ್ವಾ ಇನ್ಸ್ ಪೆಕ್ಟರ್ ವಹಿಸಿಕೊಂಡಿದ್ದರು. ಈ ವೇಳೆ, ಬೆಂಗಳೂರು ಏರ್ ಪೋರ್ಟ್ ನಿಂದ ರಾಜಸ್ಥಾನದ ಜೈಪುರಕ್ಕೆ ಇತರೇ ಸಿಬಂದಿಯೊಂದಿಗೆ ವಿಮಾನದಲ್ಲಿ ತೆರಳಿದ್ದರು. ಈ ವೇಳೆ ಪೊಲೀಸರು ಆರೋಪಿಗಳ ಜೊತೆಗೇ ಸಲುಗೆ ಬೆಳೆಸಿಕೊಂಡು ರಾಜಸ್ಥಾನದ ಪ್ರವಾಸಿ ಸ್ಥಳಗಳಿಗೆ ಸುತ್ತಾಟ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು, ಆರೋಪಿ ರಾಜಕುಮಾರ್ ಮೀನಾ ಮೊಬೈಲ್ ಹಿಡಿದು ತಾನೇ ಪೊಲೀಸರೊಂದಿಗೆ ಸೆಲ್ಪಿ ತೆಗೆಸಿಕೊಂಡಿರುವ ಫೋಟೋಗಳಿವೆ. ಮತ್ತೊಂದು ಫೋಟೋದಲ್ಲಿ ಪೊಲೀಸ್ ಸಿಬಂದಿಯೇ ಆರೋಪಿ ಹೆಗಲಿಗೆ ಕೈಹಾಕಿರುವ ರೀತಿಯ ಪೋಸು ಇದೆ. ಇದೀಗ ಸೈಬ‌ರ್ ವಂಚನೆ ಪ್ರಕರಣದ ಆರೋಪಿಗಳ ಜೊತೆಗೆ ಸುತ್ತಾಟಕ್ಕೆ ಹೋಗಿ ಪೊಲೀಸರು ಸೆಲ್ಪಿ ತೆಗೆದುಕೊಂಡ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಘಟನೆ ಸಂಬಂಧಿಸಿ ಉರ್ವಾ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪೀಟ‌ರ್ ಡಿಸೋಜ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಜೊತೆಗೆ, ಒಟ್ಟು ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಇನ್ಸ್ ಪೆಕ್ಟ‌ರ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಮುಂದಾಗಿದ್ದಾರೆ.

    ತನಿಖೆಗೆ ತೆರಳಿದ್ದ ಸಮಯದಲ್ಲಿ ಆರೋಪಿ ರಾಜ್ ಕುಮಾರ್ ಜೊತೆ ಪೀಟರ್ ಡಿಸೋಜ ಸೆಲ್ಪಿ ತೆಗೆಸಿಕೊಂಡಿರುವುದು ಇಲಾಖಾ ಶಿಸ್ತಿನ ಉಲ್ಲಂಘನೆ. ಹಾಗಾಗಿ ಅವರನ್ನು ಅಮಾನತು ಮಾಡಲಾಗಿದೆ. ಠಾಣೆಯ ಇನ್‌ಸ್ಪೆಕ್ಟರ್ ಅವರು ಈ ಘಟನೆಯ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ. ಹಾಗಾಗಿ ಅವರ ವಿರುದ್ಧವೂ ಶಿಸ್ತು ಕ್ರಮಕೈಗೊಳ್ಳಲಾಗುತ್ತಿದೆ’ ಎಂದು ನಗರ ಪೊಲೀಸ್ ಕಮಿಷನ‌ರ್ ತಿಳಿಸಿದ್ದಾರೆ.

    Post Views: 334

    Related Posts

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಗಾಂಜಾ ಮಾರಾಟ: 625.83 ಗ್ರಾಂ ಗಾಂಜಾ ಸಹಿತ ಆರೋಪಿ ಬಂಧನ

    July 23, 2026

    ಫರಂಗಿಪೇಟೆ ಕೆನರಾ ಬ್ಯಾಂಕ್ ಕಳವು ಯತ್ನ ಪ್ರಕರಣ: ಓರ್ವ ಆರೋಪಿ ಬಂಧನ

    July 23, 2026

    ಉಡುಪಿ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಬೀಚ್‌ನಲ್ಲಿ ಪತ್ತೆ!!

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.