Facebook Twitter Instagram
    Thursday, October 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ದಸರಾಗೆ ಅ.12ರಂದು ಸಿಎಂ ಚಾಲನೆ: ಅರಮನೆ ಶೈಲಿಯ ದರ್ಬಾರ್ ಮಂಟಪ, ವೈವಿಧ್ಯಮಯ ಕಾರ್ಯಕ್ರಮ
    ಇತ್ತೀಚಿನ ಸುದ್ದಿ

    ಮಂಗಳೂರು ದಸರಾಗೆ ಅ.12ರಂದು ಸಿಎಂ ಚಾಲನೆ: ಅರಮನೆ ಶೈಲಿಯ ದರ್ಬಾರ್ ಮಂಟಪ, ವೈವಿಧ್ಯಮಯ ಕಾರ್ಯಕ್ರಮ

    October 8, 2026
    Share

    ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026ಕ್ಕೆ ಅಕ್ಟೋಬರ್ 12ರಂದು ಸಂಜೆ 6:30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ.

    ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಉತ್ಸವವು ಅತ್ಯಂತ ವೈಭವದಿಂದ ಜರುಗಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ವಿಧಾನಸಭೆಯ ಉಪಸಭಾಪತಿ ಮಂಕಾಳು ವೈದ್ಯ, ಸಂಸದರು, ಶಾಸಕರು ಸೇರಿದಂತೆ ರಾಜ್ಯ ಹಾಗೂ ನೆರೆಯ ಕೇರಳ ಸರ್ಕಾರದ ಸಚಿವರು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಕುದ್ರೋಳಿ ದೇವಸ್ಥಾನದ ಕ್ಷೇತ್ರದ ಆಡಳಿತ ಸಮಿತಿಯ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದ್ದಾರೆ.

    ಅ.11ರಂದು ಬೆಳಗ್ಗೆ 8:30ಕ್ಕೆ ಮಹಾನವಮಿ ಉತ್ಸವ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ವೈದಿಕ ವಿಧಿ-ವಿಧಾನಗಳೊಂದಿಗೆ ಶ್ರೀ ಶಾರದಾ ಮಾತೆ, ಮಹಾಗಣಪತಿ, ಆದಿಶಕ್ತಿ ಹಾಗೂ ನವದುರ್ಗೆಯರ ವಿಗ್ರಹಗಳ ಪ್ರತಿಷ್ಠಾಪನೆ ನೆರವೇರಲಿದೆ. ಅಕ್ಟೋಬರ್ 21ರಂದು ಸಂಜೆ 4:00 ಗಂಟೆಗೆ ವಿಶ್ವವಿಖ್ಯಾತ ಐತಿಹಾಸಿಕ ಮಂಗಳೂರು ದಸರಾ ಶೋಭಾಯಾತ್ರೆ ಆರಂಭವಾಗಲಿದೆ. ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿರುವ ದರ್ಬಾರ್ ಮಂಟಪವನ್ನು ಈ ಬಾರಿ ನೂತನ ‘ಅರಮನೆ ಶೈಲಿ’ಯಲ್ಲಿ ಕಣ್ಮನ ಸೆಳೆಯುವಂತೆ ಅತ್ಯಂತ ಆಕರ್ಷಕವಾಗಿ ವಿನ್ಯಾಸಗೊಳಿಸಲಾಗುತ್ತಿದೆ ಎಂದರು.

    ಪ್ರತಿದಿನ ಚಂಡಿಕಾಹೋಮ:ಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8:30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ನಡೆಯಲಿದ್ದು, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದೆ. ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ಜರುಗಲಿದ್ದು, ಬೆಳಗ್ಗೆ 11:30ಕ್ಕೆ ಮಹಾಪೂರ್ಣಾಹುತಿ ನೆರವೇರಲಿದೆ. ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ನಿತ್ಯ ಮಧ್ಯಾಹ್ನ 2:30ರಿಂದ ರಾತ್ರಿ 11:30ರವರೆಗೆ ಸ್ಥಳೀಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

    ‘ಅಸಾಮಾನ್ಯ ಸ್ತ್ರೀ’ ಸನ್ಮಾನ:ಸಮಾಜದ ವಿವಿಧ ರಂಗಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ 9 ಮಂದಿ ಸಾಧಕ ಮಹಿಳೆಯರಿಗೆ ಪ್ರತಿದಿನ ಒಬ್ಬರಂತೆ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಈ ಪ್ರಶಸ್ತಿಗೆ ನೂರಕ್ಕೂ ಹೆಚ್ಚು ನಾಮನಿರ್ದೇಶನಗಳು ಬಂದಿದ್ದು, ಪರಿಶೀಲಿಸಿ 9 ಸಾಧಕರನ್ನು ಆಯ್ಕೆ ಮಾಡಲಾಗಿದೆ ಎಂದರು.

    Post Views: 5

    Related Posts

    ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ- 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 8, 2026

    ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ- ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 7, 2026

    ಪುತ್ತೂರು ನ್ಯಾಯಾಲಯದಲ್ಲಿ ಪರಾರಿಯಾಗಲು ಯತ್ನಿಸಿದ್ದ ಜಯೇಶ್‌ಗೆ 2 ವರ್ಷ ಜೈಲು ಶಿಕ್ಷೆ

    October 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಕಲಿ ಪಾಸ್‌ಪೋರ್ಟ್ ಪ್ರಕರಣ- 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 8, 2026

    ಮಂಗಳೂರು ದಸರಾಗೆ ಅ.12ರಂದು ಸಿಎಂ ಚಾಲನೆ: ಅರಮನೆ ಶೈಲಿಯ ದರ್ಬಾರ್ ಮಂಟಪ, ವೈವಿಧ್ಯಮಯ ಕಾರ್ಯಕ್ರಮ

    October 8, 2026

    ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣ- ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

    October 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.