Facebook Twitter Instagram
    Sunday, April 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಎಂಡಿಎಂಎ ಮಾರಾಟಕ್ಕೆ ಸಂಚು – 65 ಗ್ರಾಂ ಮಾದಕ ವಸ್ತು ಸಮೇತ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಎಂಡಿಎಂಎ ಮಾರಾಟಕ್ಕೆ ಸಂಚು – 65 ಗ್ರಾಂ ಮಾದಕ ವಸ್ತು ಸಮೇತ ಆರೋಪಿ ಬಂಧನ

    April 26, 2026
    Share

    ಮಂಗಳೂರು : ನಗರದ ಪಡೀಲ್ ರೈಲ್ವೇ ಅಂಡರ್ ಪಾಸ್ ಬಳಿ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಎಂಡಿಎಂಎ (MDMA) ಮಾದಕ ವಸ್ತುವನ್ನು ಮಾರಾಟ ಮಾಡಲು ಸಂಚು ರೂಪಿಸಿದ್ದ ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮೊಹಮ್ಮದ್ ಗುಲ್ ಝಹೀಮ್ ಎಂದು ಗುರುತಿಸಲಾಗಿದೆ. ಈತನ ಶೋಧನೆ ನಡೆಸಿದಾಗ ಪ್ಯಾಂಟ್ ಜೇಬಿನಲ್ಲಿ 25.23 ಗ್ರಾಂ ಹಾಗೂ ಸ್ಕೂಟರ್‌ನಲ್ಲಿ 40.55 ಗ್ರಾಂ ಸೇರಿದಂತೆ ಒಟ್ಟು 65.78 ಗ್ರಾಂ ಎಂಡಿಎಂಎ ಪತ್ತೆಯಾಗಿದೆ. ಇದರ ಮೌಲ್ಯ ಸುಮಾರು ₹6,57,800 ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಒಂದು ವಿವೋ ಮೊಬೈಲ್, ಡಿಜಿಟಲ್ ತೂಕ ಮಾಪನ ಮತ್ತು ಜಿಪ್ ಲಾಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಕಂಕನಾಡಿ ನಗರ ಪೊಲೀಸ್ ಠಾಣೆಯ ಪಿಎಸ್‌ಐ ಶಿವಕುಮಾರ್ ಮತ್ತು ತಂಡ ಏಪ್ರಿಲ್ 24ರಂದು ಗಸ್ತಿನಲ್ಲಿದ್ದಾಗ, ಪಡೀಲ್‌ನ ಪೇರ್ಲ ರಸ್ತೆಯಲ್ಲಿ ಕಪ್ಪು ಬಣ್ಣದ ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ಪೊಲೀಸ್ ವಾಹನವನ್ನು ಕಂಡು ಓಡಿ ಹೋಗಲು ಯತ್ನಿಸಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಬೆನ್ನಟ್ಟಿ ವಶಕ್ಕೆ ಪಡೆದಿದ್ದಾರೆ.
    ಆರೋಪಿ ಈ ಮಾದಕ ವಸ್ತುವನ್ನು ಬೆಂಗಳೂರಿನ ಅಪರಿಚಿತ ವ್ಯಕ್ತಿಯಿಂದ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ಮಾಡಲು ತಂದಿದ್ದಾಗಿ ವಿಚಾರಣೆ ವೇಳೆ ತಿಳಿದುಬಂದಿದೆ. ಒಟ್ಟು ₹8,08,100 ಮೌಲ್ಯದ ಸ್ವತ್ತುಗಳನ್ನು ಪೊಲೀಸರು ಜಪ್ತಿ ಮಾಡಿದ್ದು, ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 1

    karnataka mangalore PoliceInvestigation

    Related Posts

    ‘ಕಾಂತಾರ’ ಹೇಳಿಕೆ ವಿವಾದ: ರಣವೀರ್‌ಗೆ ಒಂದು ತಿಂಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಆದೇಶ

    April 25, 2026

    ಸ್ಟಾರ್ಟ್‌ಅಪ್ ಪರಿಸರಕ್ಕೆ ಹೊಸ ಚೈತನ್ಯ: ರೋಹನ್ ಕಾರ್ಪೊರೇಷನ್ ಮತ್ತು ರೇನ್ ಮೇಕರ್ಸ್ ವರ್ಕ್‌ಸ್ಪೇಸ್ ಸಂಯುಕ್ತ ಒಕ್ಕೂಟಕ್ಕೆ ಚಾಲನೆ

    April 25, 2026

    ಮಂಗಳೂರಿನಲ್ಲಿ ಮಚ್ಚು ಹಿಡಿದು ಹಲ್ಲೆ ಯತ್ನ: ಸೆಕ್ಷನ್ 307 ಅಡಿ ಪ್ರಕರಣ ದಾಖಲು

    April 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.