Facebook Twitter Instagram
    Friday, November 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬೇಟೆ ; 3.8 ಕೆ.ಜಿ. ಗಾಂಜಾ ಸಹಿತ ಯುವಕ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬೇಟೆ ; 3.8 ಕೆ.ಜಿ. ಗಾಂಜಾ ಸಹಿತ ಯುವಕ ಅರೆಸ್ಟ್

    November 6, 2026
    Share

    ಮಂಗಳೂರು : ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ 23 ವರ್ಷದ ಯುವಕನನ್ನು ಪಣಂಬೂರು ಪೊಲೀಸರು ಬಂಧಿಸಿದ್ದು, ಆತನಿಂದ ಸುಮಾರು 3 ಕೆ.ಜಿ. 800 ಗ್ರಾಂ ಗಾಂಜಾ ಸೇರಿದಂತೆ ಕಾರು ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.

    ನವೆಂಬರ್ 5ರಂದು ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಕ್ರಾಸ್ ರೈಲ್ವೆ ಬ್ರಿಡ್ಜ್ ಬಳಿ ಗಾಂಜಾ ಮಾರಾಟ ಮಾಡಲು ತಂದಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಹಾಗೂ ಪಣಂಬೂರು ಪೊಲೀಸರು ಜಂಟಿಯಾಗಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತನನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ನಿವಾಸಿ ಮೊಹಮ್ಮದ್ ನಿಸಾರ್ (23) ಎಂದು ಗುರುತಿಸಲಾಗಿದೆ.

    ವಶಪಡಿಸಿಕೊಂಡ ವಸ್ತುಗಳು:

    • 3 ಕೆ.ಜಿ. 800 ಗ್ರಾಂ ಗಾಂಜಾ – ಅಂದಾಜು ಮೌಲ್ಯ ₹1,90,000
    • ಒಂದು ಮೊಬೈಲ್ ಫೋನ್ – ₹4,000
    • ಗಾಂಜಾ ಸಾಗಾಟಕ್ಕೆ ಬಳಸಿದ ಕಾರು (KL 14 1662) – ₹2,00,000

    ಒಟ್ಟು ₹3,94,000 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಹಲವು ಪ್ರದೇಶಗಳಲ್ಲಿ ಗಾಂಜಾ ಮಾರಾಟ!

    ಆರೋಪಿಯು ಸುರತ್ಕಲ್, ಪಣಂಬೂರು, ಕಾವೂರು ಸೇರಿದಂತೆ ಮಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದನೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಹಿಂದೆ ಕೂಡ ಹಲವು ಬಾರಿ ಮಂಗಳೂರು ನಗರದಲ್ಲಿ ಗಾಂಜಾ ಮಾರಾಟ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

    ಈ ಸಂಬಂಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 137/2026ರಂತೆ NDPS ಕಾಯ್ದೆಯ ಕಲಂ 8(C), 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

    Post Views: 5

    mangalore PoliceInvestigation

    Related Posts

    ಚಾರ್ಮಾಡಿ ಸೇತುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ

    November 6, 2026

    ಬೆಂಗಳೂರಿನಲ್ಲಿ ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ

    November 5, 2026

    ಪುತ್ತೂರು: ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಡಿಕ್ಕಿ!!

    November 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪತ್ನಿಯ ಕುಟುಂಬದ ಮೇಲೆಯೇ ಸೇಡು ; ಏಳು ಮಂದಿಯನ್ನು ಕೊಂದು ಮೃತದೇಹಗಳನ್ನು ಬೇರೆ ಬೇರೆ ಕಡೆ ಎಸೆದ ಕಿರಾತಕ

    November 6, 2026

    ಮಂಗಳೂರು: ಗಾಂಜಾ ಮಾರಾಟ ಜಾಲಕ್ಕೆ ಪೊಲೀಸರ ಬೇಟೆ ; 3.8 ಕೆ.ಜಿ. ಗಾಂಜಾ ಸಹಿತ ಯುವಕ ಅರೆಸ್ಟ್

    November 6, 2026

    ಚಾರ್ಮಾಡಿ ಸೇತುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕೊಲೆ ಶಂಕೆ

    November 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.