Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಾದಕ ದ್ರವ್ಯದ ವಿರುದ್ಧ ಪೊಲೀಸರ ಕಾರ್ಯಾಚರಣೆ : ರಾತ್ರಿ 10 ಗಂಟೆಯಿಂದ ಮಣಿಪಾಲ ಬಂದ್..!
    ಇತ್ತೀಚಿನ ಸುದ್ದಿ

    ಮಾದಕ ದ್ರವ್ಯದ ವಿರುದ್ಧ ಪೊಲೀಸರ ಕಾರ್ಯಾಚರಣೆ : ರಾತ್ರಿ 10 ಗಂಟೆಯಿಂದ ಮಣಿಪಾಲ ಬಂದ್..!

    May 31, 2024
    Share

    ಉಡುಪಿ: ಉಡುಪಿಯಲ್ಲಿ ನಡೆದ ಗ್ಯಾಂಗ್ ವಾರ್ ಪ್ರಕರಣದ ಹಿನ್ನೆಲೆ ಮಾದಕ ದ್ರವ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮಣಿಪಾಲದಲ್ಲಿ ರಾತ್ರಿ 10ಗಂಟೆಯಿಂದ ಹೊಟೇಲ್ ಬಾರ್ ಸೇರಿದಂತೆ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವಂತೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಕೆ ಅರುಣ್ ಅವರು ಸೂಚನೆ ನೀಡಿದ್ದಾರೆ.

    ಕಳೆದೆರಡು ದಿನಗಳಿಂದ ಮಣಿಪಾಲದ ಬಾರ್, ಹೊಟೇಲ್, ಅಂಗಡಿ ಮಾಲಕರಿಗೆ ರಾತ್ರಿ 10ಗಂಟೆಯೊಳಗೆ ಅಂಗಡಿ ಬಂದ್ ಮಾಡುವಂತೆ ಪೊಲೀಸರು ಸೂಚನೆ ನೀಡುತ್ತಿದ್ದಾರೆ. ಬುಧವಾರ ರಾತ್ರಿ ಭಾಗಃಶ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿದ್ದವು. ಆದರೆ ಕೆಲವು ಬಾರ್‌ಗಳು ರಾತ್ರಿ 11ಗಂಟೆಯವರೆಗೂ ತೆರೆದಿರುವುದು ಕಂಡುಬಂದವು.

    ಮಣಿಪಾಲದ ಎಲ್ಲ ಅಂಗಡಿಮುಗ್ಗಟ್ಟುಗಳನ್ನು ಬಂದ್ ಮಾಡಿಸಿ ಡ್ರಗ್ಸ್ ಗಾಂಜಾ ಸೇರಿದಂತೆ ಮಾದಕ ದ್ರವ್ಯ ವಿರುದ್ಧ ಕಾರ್ಯಾಚರಣೆ ನಡೆಸಲಾಗುವುದು. ಮಣಿಪಾಲದಲ್ಲಿ ಈ ರೀತಿ ಕಾರ್ಯಾಚರಣೆ ಮಾಡಿದರೆ ಡ್ರಗ್ಸ್ ದಂಧೆಯ ಮೂಲಗಳ ಬಗ್ಗೆ ಮಾಹಿತಿ ಸಿಗಲಿದೆ. ಅದರಂತೆ ಮುಂದೆ ಕಟ್ಟುನಿಟ್ಟಿನ ಕ್ರಮ ಜರಗಿಸಲಾಗುವುದು ಎಂದು ಎಸ್ಪಿ ಡಾ.ಕೆ.ಅರುಣ್ ತಿಳಿಸಿದ್ದಾರೆ. ಈಗಾಗಲೇ ಬಾರ್, ಹೊಟೇಲ್, ಅಂಗಡಿಗಳ ಮಾಲಕರನ್ನು ಸೂಚನೆ ನೀಡಲಾಗಿದೆ. ಬುಧವಾರ ರಾತ್ರಿ ಕೆಲವರು 10ಗಂಟೆಗೆ ಬಂದ್ ಮಾಡುವ ಬಗ್ಗೆ ಪೊಲೀಸರೊಂದಿಗೆ ವಾದ ಮಾಡಿದ್ದಾರೆಂಬ ಮಾಹಿತಿ ಸಿಕ್ಕಿದೆ. ಆದರೆ ಇಂದು ರಾತ್ರಿಯಿಂದ ಎಲ್ಲ ಬಂದ್ ಮಾಡಲಿದ್ದಾರೆ. ಸದ್ಯ ಮಣಿಪಾಲದಲ್ಲಿ ಮಾತ್ರ ಬಂದ್ ಇರುತ್ತದೆ. ಉಡುಪಿಯಲ್ಲಿ ಯಾವುದೇ ರೀತಿಯ ಬಂದ್ ಇರುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    Post Views: 184

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.