Facebook Twitter Instagram
    Wednesday, November 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ: ಮಾನವ ಕಳ್ಳಸಾಗಣೆ ಪ್ರಕರಣ – ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ: ಮಾನವ ಕಳ್ಳಸಾಗಣೆ ಪ್ರಕರಣ – ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    November 11, 2026
    Share

    ಮಣಿಪಾಲ: ಅನೈತಿಕ ಚಟುವಟಿಕೆಗಳ ಉದ್ದೇಶಕ್ಕಾಗಿ ಮಾನವ ಕಳ್ಳಸಾಗಣೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ 2025ರಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಯಿಂದ ತಪ್ಪಿಸಿಕೊಂಡು ಕಳೆದ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳ ಮೂಲದ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಕಾಜಲ್ (40) ಮತ್ತು ಸಂಜಯ್ ಶಾ (49) ಎಂದು ಗುರುತಿಸಲಾಗಿದೆ.

    ಪ್ರಕರಣದ ತನಿಖೆ ಪ್ರಗತಿಯಲ್ಲಿದ್ದ ಸಂದರ್ಭದಲ್ಲಿ ಆರೋಪಿಗಳು ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದರು. ಅವರ ಪತ್ತೆಗಾಗಿ ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ಮಾರ್ಗದರ್ಶನದಲ್ಲಿ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.
    ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ, ಠಾಣೆಯ ಪಿಎಸ್‌ಐ ತಿಮ್ಮೇಶ್ ಬಿ.ಎನ್. ಅವರನ್ನು ಸಹಾಯಕ ತನಿಖಾಧಿಕಾರಿಯಾಗಿ ನೇಮಿಸಲಾಗಿತ್ತು. ಪೊಲೀಸ್ ಸಿಬ್ಬಂದಿಗಳಾದ ಸುರೇಶ್ ಶೆಟ್ಟಿ, ಚೇತನ್, ರವಿರಾಜ್ ಹಾಗೂ ಮಹಿಳಾ ಸಿಬ್ಬಂದಿಗಳಾದ ಜ್ಯೋತಿ ನಾಯಕ್ ಮತ್ತು ಸುಮಲತಾ ಅವರನ್ನು ಒಳಗೊಂಡ ತಂಡ ಆರೋಪಿಗಳ ಪತ್ತೆ ಕಾರ್ಯಾಚರಣೆಗಾಗಿ ಪಶ್ಚಿಮ ಬಂಗಾಳಕ್ಕೆ ತೆರಳಿತ್ತು. ಮ್ಯಾಪ್ಸ್ನೋಡಿ

    ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ವಿಶೇಷ ತಂಡವು ನವೆಂಬರ್ 3ರಂದು ಬೆಳಿಗ್ಗೆ 11 ಗಂಟೆಗೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನೇತಾಜಿ ನಗರದಲ್ಲಿ ಇಬ್ಬರು ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಬಂಧಿಸಿದೆ.

    ಬಂಧಿತ ಆರೋಪಿಗಳನ್ನು ಕಾನೂನು ಪ್ರಕ್ರಿಯೆಯಂತೆ ಪಶ್ಚಿಮ ಬಂಗಾಳದ ಎಲ್.ಡಿ. ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಬಳಿಕ ನವೆಂಬರ್ 7ರಂದು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ನವೆಂಬರ್ 11ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ಕಳೆದ ಒಂದು ವರ್ಷದಿಂದ ಪೊಲೀಸರ ಕೈಗೆ ಸಿಗದೆ ಪಶ್ಚಿಮ ಬಂಗಾಳದಲ್ಲಿ ನೆಲೆಸಿದ್ದ ಆರೋಪಿಗಳನ್ನು ವಿಶೇಷ ಕಾರ್ಯಾಚರಣೆ ಮೂಲಕ ಬಂಧಿಸಿರುವುದು ಮಣಿಪಾಲ ಪೊಲೀಸರ ತನಿಖಾ ಕಾರ್ಯಾಚರಣೆಯ ಪ್ರಮುಖ ಯಶಸ್ಸಾಗಿದೆ.

    Post Views: 1

    Related Posts

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026

    ಬಂಟ್ವಾಳ: ಅಕ್ರಮ ಕೆಂಪು ಲ್ಯಾಟರೈಟ್ ಮಣ್ಣು ಸಾಗಾಟ-ಲಾರಿ ವಶಕ್ಕೆ

    November 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಣಿಪಾಲ: ಮಾನವ ಕಳ್ಳಸಾಗಣೆ ಪ್ರಕರಣ – ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

    November 11, 2026

    ಮಂಗಳೂರು: ಜಾಮೀನಿನ ಮೇಲೆ ಹೊರಬಂದ ಧರ್ಮಗುರುಗೆ ಮತ್ತೆ ಸಂಕಷ್ಟ – ಮತ್ತೊಂದು ಎಫ್‌ಐಆರ್ ದಾಖಲು

    November 10, 2026

    ಉಡುಪಿ: ಪೆಟ್ರೋಲ್ ಪಂಪ್ ಮಾಲೀಕನ ಮೇಲೆ ಮಾರಣಾಂತಿಕ ಹಲ್ಲೆ!!

    November 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.