Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಶಾಲಾ ಬಸ್ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಸುಳ್ಳು ದೂರು ನೀಡಿದ್ದ ಬಸ್ ಕಂಡಕ್ಟರ್ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ: ಶಾಲಾ ಬಸ್ ಅಪಘಾತ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಸುಳ್ಳು ದೂರು ನೀಡಿದ್ದ ಬಸ್ ಕಂಡಕ್ಟರ್ ಬಂಧನ

    July 5, 2026
    Share

    ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಶಾಲಾ ಬಸ್ ಅಪಘಾತ ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು ದೊರೆತಿದ್ದು, ಬಸ್ ಚಾಲನೆ ಮಾಡುತ್ತಿದ್ದ ಕಂಡಕ್ಟರ್ ನನ್ನು ಪೊಲೀಸರು ಬಂಧಿಸಿದ್ದಾರೆ.  ಬಸ್ ಕಂಡಕ್ಟರ್‌ನಾಗಿದ್ದ ಯುವಕನೇ ಬಸ್ ಚಾಲನೆ ಮಾಡಿ ಅಪಘಾತಕ್ಕೆ ಕಾರಣನಾಗಿದ್ದಾನೆ ಎಂಬುದು ತನಿಖೆಯಲ್ಲಿ ಬಹಿರಂಗವಾಗಿದ್ದು, ಅದರಂತೆ ಕಟಪಾಡಿ ನಿವಾಸಿ ಬಸ್ ಕಂಡಕ್ಟರ್ ಮಹಮ್ಮದ್ ರಾಹಿಜ್ (20)ಎಂಬತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.  ಜೂನ್ 25 ರಂದು ಬೆಳಿಗ್ಗೆ ಮಣಿಪಾಲ ಸಿಂಡಿಕೇಟ್ ಸರ್ಕಲ್ ಸಮೀಪ ಪೆರಂಪಳ್ಳಿಯ ಅಲ್ ಇಬಾದ್ ಇಂಡಿಯನ್ ಶಾಲೆಗೆ ಸೇರಿದ ಶಾಲಾ ಬಸ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿತ್ತು. ಘಟನೆಯಲ್ಲಿ ಬಸ್‌ನಲ್ಲಿದ್ದ ಶಾಲಾ ಮಕ್ಕಳು ಗಾಯಗೊಂಡಿದ್ದರು. ಅಪಘಾತದ ಬಳಿಕ ರಾಹಿಜ್ ತನ್ನ ತಂದೆ ರಿಜ್ವಾನ್ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ದೂರು ನೀಡಿದ್ದರು.  ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಮಹಮ್ಮದ್ ರಾಹಿಜ್ ತಾನೇ ಬಸ್ ಚಾಲನೆ ಮಾಡುತ್ತಿದ್ದ ವೇಳೆ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದು ದೃಢಪಟ್ಟಿದೆ. ತನಿಖೆಯಲ್ಲಿ, ಆರೋಪಿಗೆ ಚಾಲನಾ ಪರವಾನಗಿ ಇಲ್ಲದಿದ್ದರೂ ಶಾಲಾ ಬಸ್ ಚಾಲನೆ ಮಾಡಿರುವುದು ಬಹಿರಂಗವಾಗಿದೆ. ಜೊತೆಗೆ, ಅಪಘಾತದ ಬಳಿಕ ತನ್ನ ತಂದೆಯ ವಿರುದ್ಧ ಸುಳ್ಳು ದೂರು ನೀಡಿ ತನಿಖೆಯನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದಾನೆ ಎಂಬುದೂ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಮ್ಮದ್ ರಾಹಿಜ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 138

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.