Facebook Twitter Instagram
    Tuesday, August 4
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ

    August 4, 2026
    Share

    ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರನಗರದ ಜನನಿ ಬಾರ್ & ರೆಸ್ಟೋರೆಂಟ್ ಸಮೀಪ ಯುವಕನ ಮೇಲೆ ಹಲ್ಲೆ ನಡೆಸಿದ ನಿಟ್ಟೆ ಕಾಲೇಜಿನ ನಾಲ್ವರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

    ಆಗಸ್ಟ್ 2ರಂದು ರಾತ್ರಿ ಸುಮಾರು 11.50 ಗಂಟೆಗೆ ಯಶ್‌ರಾಜ್ ಅವರು ತಮ್ಮ ಸಹೋದರ ಪವನ್ ಕುಮಾ‌ರ್ ಹಾಗೂ ಸ್ನೇಹಿತ ಶ್ರೇಯಸ್‌ ಅವರೊಂದಿಗೆ ಈಶ್ವರನಗರದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಎರಡು ಕಾರುಗಳಲ್ಲಿ ಬಂದ ಆರೋಪಿತರು ಪವನ್ ಕುಮಾರ್‌ ಅವರನ್ನು ತಡೆದು ನಿಲ್ಲಿಸಿ ವಿನಾಕಾರಣ ಜಗಳ ಆರಂಭಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಅಕ್ಷಯ್ ಎ. (21), ಪುನೀತ್ ಎಸ್. (21), ಶಮಂತ ಕೆ.ಆರ್. (21) ಹಾಗೂ ಯಶವಂತ್ ಬಿ.ಜೆ. (21) ಬಂಧಿತರು. ಇವರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಪವನ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೇ ವೇಳೆ ಮಧ್ಯಪ್ರವೇಶಿಸಿದ ಯಶ್‌ರಾಜ್ ಹಾಗೂ ಶ್ರೇಯಸ್ ಅವರ ಮೇಲೆಯೂ ಹಲ್ಲೆ ನಡೆಸಿ, ಕಾಲಿನಿಂದ ತುಳಿದು, ಬಟ್ಟೆಗಳನ್ನು ಹರಿದು ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಮಣಿಪಾಲ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ತನಿಖೆ ವೇಳೆ ಬಂಧಿತ ಆರೋಪಿಗಳೆಲ್ಲರೂ ನಿಟ್ಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳೆಂದು ತಿಳಿದುಬಂದಿದೆ. ಪ್ರಕರಣದ ಕುರಿತು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ಅವರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

    Post Views: 8

    Related Posts

    ಕಾರ್ಕಳ: ಹೋಟೆಲ್ ನಲ್ಲಿ ಇಸ್ಪೀಟು ಜುಗಾರಿ-ಏಳು ಮಂದಿ ವಶಕ್ಕೆ, ನಾಲ್ವರು ಪರಾರಿ

    August 4, 2026

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026

    ಮುಂದಿನ ತಲೆಮಾರಿಗೆ ಪ್ರಕೃತಿ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ: ಡಾ| ಜಿ. ಸಂತೋಷ್

    August 4, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಹೋಟೆಲ್ ನಲ್ಲಿ ಇಸ್ಪೀಟು ಜುಗಾರಿ-ಏಳು ಮಂದಿ ವಶಕ್ಕೆ, ನಾಲ್ವರು ಪರಾರಿ

    August 4, 2026

    ಮಣಿಪಾಲ ಬಾರ್ ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ವಿದ್ಯಾರ್ಥಿಗಳ ಬಂಧನ

    August 4, 2026

    ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಕ್ರಮ

    August 4, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.