Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಣಿಪುರದಲ್ಲಿ ಭೂ ಕುಸಿತ, ಸಾವಿನ ಸಂಖ್ಯೆ 25ಕ್ಕೆ ಏರಿಕೆ
    ಇತ್ತೀಚಿನ ಸುದ್ದಿ

    ಮಣಿಪುರದಲ್ಲಿ ಭೂ ಕುಸಿತ, ಸಾವಿನ ಸಂಖ್ಯೆ 25ಕ್ಕೆ ಏರಿಕೆ

    July 2, 2022
    Share

    ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಪ್ರಾಂತೀಯ ಸೇನೆಯ ತೂಪುಲ್ ರೈಲ್ವೆ ನಿರ್ಮಾಣ ಕಾಮಗಾರಿ ಶಿಬಿರದ ಬಳಿ ಬೆಟ್ಟ ಕುಸಿದು ದುರಂತ ಸಂಭವಿಸಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ.

    ಅವರನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ.

    ಜಿರಿಬಾಂಬ್‍ನಿಂದ ಇಂಫಾಲವರೆಗಿನ ರೈಲ್ವೆ ಹಳಿ ಕಾವಲಿಗೆ ನಿಯೋಜಿಸಲಾಗಿದ್ದ ಭಾರತೀಯ ಸೇನೆಯ 107 ಟೆರಿಟೋರಿಯಲ್ ಆರ್ಮಿ ಶಿಬಿರಕ್ಕೆ ಗುಡ್ಡಕುಸಿತದಿಂದ ವ್ಯಾಪಕ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಮತ್ತು ಎಸ್‍ಡಿಆರ್‍ಎಫ್ ಹೆಚ್ಚುವರಿ ತಂಡಗಳು ಸಿಲ್ವರ್ ಮತ್ತು ಕೊಯಮಾದಿಂದ ಆಗಮಿಸಿದ್ದು, ಸ್ಥಳೀಯ ಶೋಧನಾ ತಂಡಗಳ ಜತೆ ಕಾರ್ಯಾಚರಣೆ ಮುಂದುವರೆಸಿವೆ ಎಂದು ಉಪವಿಭಾಗಾಧಿಕಾರಿ ಸೋಲಮನ್ ಎಲ್.ಫಿಮೆಟ್ ಹೇಳಿದ್ದಾರೆ.

    ಇದು ರಾಜ್ಯದ ಇತಿಹಾಸದಲ್ಲಿ ಭೀಕರ ಭೂ ಕುಸಿತದ ಪ್ರಕರಣವಾಗಿದ್ದು, 2ಕಿ.ಮೀ. ವ್ಯಾಪ್ತಿಯಲ್ಲಿ ಹರಡಿದೆ ಎಂದು ತಿಳಿಸಿದ್ದಾರೆ. ಇದುವರೆಗೂ 13 ಮಂದಿ ಸೇನಾ ಸಿಬ್ಬಂದಿ, 5 ಮಂದಿ ನಾಗರಿಕರನ್ನು ರಕ್ಷಿಸಲಾಗಿದೆ. ನಾಪತ್ತೆಯಾಗಿರುವ 29 ಮಂದಿ ನಾಗರಿಕರಿಗೆ ಶೋಧಕಾರ್ಯ ಮುಂದುವರೆಸಲಾಗಿದೆ.

    ಈ ದುರಂತದಲ್ಲಿ 9 ಮಂದಿ ಯೋಧರೂ ಮೃತಪಟ್ಟಿದ್ದಾರೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

    Post Views: 233

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.