Facebook Twitter Instagram
    Saturday, November 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಮನೋಹರ್ ಶೆಟ್ಟಿ ಕೊಲೆ ಪ್ರಕರಣ- ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು
    ಇತ್ತೀಚಿನ ಸುದ್ದಿ

    ಉಡುಪಿ: ಮನೋಹರ್ ಶೆಟ್ಟಿ ಕೊಲೆ ಪ್ರಕರಣ- ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026
    Share

    ಉಡುಪಿ: ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ), ಗೃಹ ಸಚಿವಾಲಯ (ಎಂಹೆಚ್‌ಎ) ಮತ್ತು ಕರ್ನಾಟಕ ಪೊಲೀಸರ ಸಮನ್ವಯದೊಂದಿಗೆ ಕೇಂದ್ರ ತನಿಖಾ ದಳ (ಸಿಬಿಐ) ಕಾರ್ಯಾಚರಣೆ ನಡೆಸಿ, ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಕೇಶವ ಆಚಾರ್ಯನನ್ನು ಶುಕ್ರವಾರ (ನವೆಂಬರ್ 27) ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಎಇ) ನಿಂದ ಭಾರತಕ್ಕೆ ಗಡಿಪಾರು ಮಾಡಿಸುವಲ್ಲಿ ಯಶಸ್ವಿಯಾಗಿದೆ.

    ಭೂಗತ ಪಾತಕಿ ಕಲಿ ಯೋಗೀಶ್ ಸಹಚರನಾಗಿ ಗುರುತಿಸಿಕೊಂಡಿರುವ ಆಚಾರ್ಯ, 2002ರಲ್ಲಿ ನಡೆದ ಮನೋಹರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಅಪರಾಧ ಸಂಖ್ಯೆ 251/2002 ರಂತೆ ದಾಖಲಾಗಿರುವ ಈ ಪ್ರಕರಣದಲ್ಲಿ, ಕೊಲೆಗೆ ಪ್ರಚೋದನೆ ನೀಡಿದ ಆರೋಪ ಈತನ ಮೇಲಿದೆ.

    ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ಮಾಹಿತಿಯಂತೆ, ಆಚಾರ್ಯನನ್ನು ಭಾರತಕ್ಕೆ ಕರೆತರುವ ಪ್ರಯತ್ನದ ಭಾಗವಾಗಿ 2026ರ ಮೇ ತಿಂಗಳಲ್ಲಿ ಈತನ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು ಮತ್ತು ಸುಮಾರು ಮೂರು ತಿಂಗಳ ಹಿಂದೆ ಪಾಸ್‌ಪೋರ್ಟ್ ರದ್ದುಪಡಿಸಲಾಗಿತ್ತು.

    2002ರ ಜುಲೈನಲ್ಲಿ ಮನೋಹರ್ ಶೆಟ್ಟಿ ಹತ್ಯೆಗೆ ಆಚಾರ್ಯ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿದ್ದ ಎಂದು ಸಿಬಿಐ ತಿಳಿಸಿದೆ. 2019ರಲ್ಲಿ ಭಾರತದಿಂದ ಪರಾರಿಯಾಗಿದ್ದ ಆಚಾರ್ಯ ಸೇರಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ.

    ಕರ್ನಾಟಕ ಪೊಲೀಸರ ಮನವಿಯ ಮೇರೆಗೆ ನವದೆಹಲಿಯ ಇಂಟರ್‌ಪೋಲ್ ನ್ಯಾಷನಲ್ ಸೆಂಟ್ರಲ್ ಬ್ಯೂರೋ (ಎನ್‌ಸಿಬಿ) ಈತನ ವಿರುದ್ಧ ರೆಡ್ ನೋಟಿಸ್ ಪ್ರಕಟಿಸಲು ನೆರವಾಗಿತ್ತು. ಬಳಿಕ ಯುಎಇ ಅಧಿಕಾರಿಗಳು ಆತನನ್ನು ಪತ್ತೆಹಚ್ಚಿ ಬಂಧಿಸಿದ್ದು, ಅಗತ್ಯ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ನಂತರ ಭಾರತಕ್ಕೆ ಗಡಿಪಾರು ಮಾಡಿದ್ದಾರೆ.

    ನವೆಂಬರ್ 27ರಂದು ಮುಂಬೈ ವಿಮಾನ ನಿಲ್ದಾಣಕ್ಕೆ ಬಂದಿಳಿದ ಆಚಾರ್ಯನನ್ನು ಕರ್ನಾಟಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆಚಾರ್ಯನನ್ನು ಉಡುಪಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಲು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲಾ ಪೊಲೀಸರ ಜಂಟಿ ತಂಡ ಮುಂಬೈಗೆ ತೆರಳಿದೆ ಎಂದು ಎಸ್‌ಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

    ಇಂಟರ್‌ಪೋಲ್‌ಗಾಗಿ ಭಾರತದ ನ್ಯಾಷನಲ್ ಸೆಂಟ್ರಲ್ ಬ್ಯೂರೋ ಆಗಿ ಕಾರ್ಯನಿರ್ವಹಿಸುವ ಸಿಬಿಐ, ‘ಭಾರತ್‌ಪೋಲ್’ ಮೂಲಕ ದೇಶದಾದ್ಯಂತ ಇರುವ ಕಾನೂನು ಜಾರಿ ಸಂಸ್ಥೆಗಳೊಂದಿಗೆ ಅಂತರರಾಷ್ಟ್ರೀಯ ಪೊಲೀಸ್ ಸಹಕಾರವನ್ನು ಸಂಯೋಜಿಸುತ್ತದೆ. 2019ರಿಂದ ಈವರೆಗೆ, 2026ರಲ್ಲಿ ಕರೆತರಲಾದ 77 ಪರಾರಿ ಆರೋಪಿಗಳು ಸೇರಿದಂತೆ ೩೦೦ಕ್ಕೂ ಹೆಚ್ಚು ಬೇಕಾಗಿದ್ದ ಅಪರಾಧಿಗಳನ್ನು ಇಂಟರ್‌ಪೋಲ್ ಮೂಲಕ ಭಾರತಕ್ಕೆ ವಾಪಸ್ ಕರೆತರಲಾಗಿದೆ ಎಂದು ಸಿಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

    Post Views: 1

    Related Posts

    ಡಿಜಿಟಲ್ ತಂತ್ರಜ್ಞಾನದ ಮೂಲಕ M.I.O ವತಿಯಿಂದ ‘M.I.O ಕ್ಯಾನ್ಸರ್ ಸ್ಟ್ರೀನರ್‌ ಆ್ಯಪ್’ ಬಿಡುಗಡೆ

    November 28, 2026

    ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಐಟಿಐ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    November 28, 2026

    ಕಡಬ: ಕಾರು–ಸ್ಕೂಟರ್ ಮುಖಾಮುಖಿ ಡಿಕ್ಕಿ; ಸ್ಕೂಟರ್ ಸವಾರ ಸಾವು

    November 28, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಮನೋಹರ್ ಶೆಟ್ಟಿ ಕೊಲೆ ಪ್ರಕರಣ- ದುಬೈನಿಂದ ಮೋಸ್ಟ್ ವಾಂಟೆಡ್ ಆರೋಪಿ ರಾಜೇಶ್ ಆಚಾರ್ಯ ಗಡಿಪಾರು

    November 28, 2026

    ಡಿಜಿಟಲ್ ತಂತ್ರಜ್ಞಾನದ ಮೂಲಕ M.I.O ವತಿಯಿಂದ ‘M.I.O ಕ್ಯಾನ್ಸರ್ ಸ್ಟ್ರೀನರ್‌ ಆ್ಯಪ್’ ಬಿಡುಗಡೆ

    November 28, 2026

    ಬೆಳ್ತಂಗಡಿ: ವಿಷ ಸೇವಿಸಿ ಅಸ್ವಸ್ಥಗೊಂಡಿದ್ದ ಐಟಿಐ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಸಾವು

    November 28, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.