Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಆಯುಕ್ತ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ
    ಇತ್ತೀಚಿನ ಸುದ್ದಿ

    25 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಆಯುಕ್ತ ಮನ್ಸೂರ್ ಅಲಿಗೆ ಜಾಮೀನು ನಿರಾಕರಣೆ

    April 6, 2024
    Share

    ಮಂಗಳೂರು : ಬರೋಬ್ಬರಿ 25 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ. ಮಾರ್ಚ್ 23ರಂದು ಮುಡಾ ಆಯುಕ್ತ ಮನ್ಸೂರ್ ಅಲಿಯ ನಿರ್ದೇಶನದಂತೆ ಬ್ರೋಕರ್ ಮಹಮ್ಮದ್ ಸಲಿಂ ಎಂಬಾತ 25 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 03/2024 ಕಲಂ 7(ಎ) ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988 (ತಿದ್ದುಪಡಿ ಕಾಯ್ದೆ, 2018) ರಡಿ ಪ್ರಕರಣ ದಾಖಲಾಗಿದೆ. ಇಬ್ಬರನ್ನು ದಸ್ತಗಿರಿ ಮಾಡಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯವು ಎಪ್ರಿಲ್ 8ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ಬಳಿಕ ಮುಡಾ ಆಯುಕ್ತ ಮನ್ಸೂರ್ ಅಲಿ ಮತ್ತು ಬ್ರೋಕರ್ ಮಹಮ್ಮದ್ ಸಲಿಂ ನ್ಯಾಯಾಲಯಕ್ಕೆ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಎಪ್ರಿಲ್ 5ರಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಎಸ್. ವಿಚಾರಣೆ ನಡೆಸಿ, ಆರೋಪಿಗಳಿಗೆ ಜಾಮೀನು ನಿರಾಕರಿಸಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ.

    Post Views: 193

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.