Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಮರವೂರು ರೈಲ್ವೇ ಸೇತುವೆ ಕೆಳಗೆ ಈಜಲು ತೆರಳಿದ್ದ ಯುವಕ ನೀರುಪಾಲು
    ಇತ್ತೀಚಿನ ಸುದ್ದಿ

    ಮಂಗಳೂರು : ಮರವೂರು ರೈಲ್ವೇ ಸೇತುವೆ ಕೆಳಗೆ ಈಜಲು ತೆರಳಿದ್ದ ಯುವಕ ನೀರುಪಾಲು

    November 21, 2023
    Share

    ಮಂಗಳೂರು : ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಯುವಕ ನೀರುಪಾಲಾದ ಘಟನೆ ಮಂಗಳೂರು ಹೊರವಲಯದ ಮರವೂರಿನಲ್ಲಿ ಸೋಮವಾರ ಸಂಜೆ ನಡೆದಿದೆ.

    ಮರವೂರು ರೈಲ್ವೇ ಸೇತುವೆಯ ಕೆಳಗಿನ ನದಿಯಲ್ಲಿ ಈಜಲು ತೆರಳಿದ್ದ ವೇಳೆ ಆಯತಪ್ಪಿ ನದಿಗೆ ಬಿದ್ದು ಈ ಘಟನೆ ಸಂಭವಿಸಿದೆ. ಬಜ್ಪೆ ನಿವಾಸಿ ಸದ್ಯ ಸುರತ್ಕಲ್‌ ಸಮೀಪದ ಚೊಕ್ಕಬೊಟ್ಟುವಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಾಕಿರ್‌ (30) ಮೃತ ದುರ್ದೈವಿಯಾಗಿದ್ದಾನೆ. ಶಾಕಿರ್‌ ತನ್ನ 4 ಮಂದಿ ಸ್ನೇಹಿತರೊಂದಿಗೆ ಮರವೂರು ರೈಲ್ವೇ ಸೇತುವೆಯ ಕೆಳ ಭಾಗಕ್ಕೆ ಈಜಲೆಂದು ತೆರಳಿದ್ದರು ಎನ್ನಲಾಗಿದೆ. ಈ ವೇಳೆ ಶಾಕಿರ್‌ ಕಾಲು ಜಾರಿ ಆಯತಪ್ಪಿ ನದಿಗೆ ಬಿದ್ದು ನೀರಿನಲ್ಲಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ. ಬಳಿಕ ಜೊತೆಗಿದ್ದ ಸ್ನೇಹಿತರು ಪೊಲೀಸರು ಮತ್ತು ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಬಂದ ಕಾವೂರು ಪೊಲೀಸರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಅವರು ಬಂದು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲೆತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕಾವೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.