Facebook Twitter Instagram
    Friday, July 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ: ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು
    ಇತ್ತೀಚಿನ ಸುದ್ದಿ

    ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ: ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು

    July 3, 2026
    Share

    ಮಂಗಳೂರು: ನಗರದ ಕೋಡಿಯಾಲ್‌ನಲ್ಲಿರುವ ಜೈಲಿನೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಬೆನ್ನಟ್ಟಿ ಹಿಡಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.

    ಮೂಲತಃ ಬಂಟ್ವಾಳ ಕೊಳತ್ತಮಜಲು ಕೋಳಕೇರಿಯ ಪ್ರಸಕ್ತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.ಗುರುವಾರ ಮುಂಜಾನೆ ಸುಮಾರು 4:20ರ ವೇಳೆಗೆ ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಅನುಮಾನಾಸ್ಪದ ವಸ್ತುವನ್ನು ಅಪರಿಚಿತ ವ್ಯಕ್ತಿಯೊಬ್ಬ ಎಸೆದಿರುವುದನ್ನು ಕರ್ತವ್ಯನಿರತ ಕೆಎಸ್‌ಐಎಸ್‌ಎಫ್‌ ಆರ್‌ಪಿಸಿ ಕಿರಣ್ ಎಂಬವರು ಗಮನಿಸಿದರು.

    ಹಾಗೇ ಎಎಸ್ಸೆಗೆ ಮಾಹಿತಿ ನೀಡಿ ಸುಮಾರು 500 ಮೀಟರ್ ದೂರದವರೆಗೆ ಬೆನ್ನಟ್ಟಿಕೊಂಡು ಹೋಗಿ ಆರೋಪಿಯನ್ನು ಹಿಡಿದರು. ಬಳಿಕ ಪೊಲೀಸ್ ನಿರೀಕ್ಷಕ ಸುಭಾಷ್‌ರಿಗೆ ಮಾಹಿತಿ ನೀಡಿದ್ದು, ಅವರು ಬಂದು ವಿಚಾರಣೆ ನಡೆಸಿದಾಗ ಆರೋಪಿ ಸತ್ಯ ಬಾಯ್ದಿಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಮೂಡುಶೆಡ್ಡೆ ನಿವಾಸಿಯೊಬ್ಬ ಗಾಂಜಾ, ಲೈಟರ್, ಗಾಂಜಾ ಸೇದುವ ಪೇಪರ್‌ಗಳನ್ನು ಕೊಟ್ಟು ಈ ವಸ್ತುಗಳನ್ನು ಕಾರಾಗೃಹದ ಒಳಗೆ ಎಸೆಯಬೇಕು ಎಂದು ಹೇಳಿ ಈ ಕೃತ್ಯ ಎಸಗಲು 2 ಸಾವಿರ ರೂ.ನೀಡಿರುತ್ತಾನೆ. ಅಲ್ಲದೆ ಕಾರಾಗೃಹದಲ್ಲಿ ಬಂಧಿಯಾಗಿರುವ ಲಾಯ್ ವೇಗಸ್ ಎಂಬಾತನ ಮೊಬೈಲ್ ನಂಬ‌ರ್ ನೀಡಿದ್ದು, ಆತನ ಸೂಚನೆಯಂತೆ ಆತ ಹೇಳಿದ ಜಾಗಕ್ಕೆ (ಕಾರಾಗೃಹ ಅಡುಗೆ ಮನೆ) ಗಾಂಜಾ ಎಸೆದಿರುವುದಾಗಿ ಆರೋಪಿ ತಿಲಕರಾಜ್ ವಿಚಾರಣೆಯ ವೇಳೆ ಬರ್ಕೆ ಪೊಲೀಸರಿಗೆ ತಿಳಿಸಿದ್ದಾನೆ.ಈ ಪ್ರಕರಣದಲ್ಲಿ ಆರೋಪಿಗಳಾದ ತಿಲಕ್‌ರಾಜ್ ಮತ್ತು ಲಾಯ್ ವೇಗಸ್ ವಿರುದ್ಧ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಮತ್ತು ಕರ್ನಾಟಕ ಕಾರಾಗೃಹಗಳ ತಿದ್ದುಪಡಿ-2022 ಕಾಯಿದೆ 42ರಡಿ ಪ್ರಕರಣ ದಾಖಲಾಗಿದೆ.

    ಕಾರ್ಯಾಚರಣೆಗೆ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ಕೆಎಸ್‌ಐಎಸ್‌ಎಫ್ ಪೊಲೀಸ್ ನಿರೀಕ್ಷಕ ಸುಭಾಷ್ ಎಚ್‌.ಎನ್. ಹಾಗೂ ಕಾರಗೃಹ ಸಿಬ್ಬಂದಿ ಸಹಕರಿಸಿದ್ದಾರೆ.

    Post Views: 8

    Related Posts

     ರಾಜ್ಯ ಸರ್ಕಾರದಿಂದ ಮತ್ತೆ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

    July 3, 2026

    ಉಡುಪಿ: ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ

    July 3, 2026

    ಕಾರಿಗೆ ಫುಲ್ ಟ್ಯಾಂಕ್ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿಯಾದ ಮೂವರ ಬಂಧನ

    July 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ರಾಜ್ಯ ಸರ್ಕಾರದಿಂದ ಮತ್ತೆ ಐವರು ‘IAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

    July 3, 2026

    ಮಂಗಳೂರು: ಜೈಲಿನೊಳಗೆ ಗಾಂಜಾ ಎಸೆದ ಪ್ರಕರಣ: ಆರೋಪಿಯನ್ನು ಬೆನ್ನಟ್ಟಿ ಹಿಡಿದ ಪೊಲೀಸರು

    July 3, 2026

    ಉಡುಪಿ: ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ

    July 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.