ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ತೊಕ್ಕೊಟ್ಟಿನ ಬಳಿಯ ಪೆರ್ಮಣ್ಣೂರು ಗ್ರಾಮದ ಮಾಜೀಲ್ ಅಬ್ದುಲ್ ರೆಹಮಾನ್ ಮತ್ತು ದಾವಣಗೆರೆಯ ಹೊನ್ನಾಳಿ ಮೂಲದ ನದೀಂ ಅಹಮದ್ ಎಂದು ಗುರುತಿಸಲಾಗಿದೆ.
ಇಬ್ಬರೂ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಖ್ ಹಾಗೂ ಆತನ ಜೊತೆಗಾರರಾದ ಮಾಜಿ ಮುನೀರ್ ಮತ್ತು ಸೈಯದ್ ಯಾಸಿನ್ ಜೊತೆ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಶಾರಿಕ್, ಮಾಜ್ ಮುನೀರ್ ಹಾಗೂ ಯಾಸಿನ್ ಶಿವಮೊಗ್ಗದ ತುಂಗಾ ದಡ ಹಾಗೂ ಮಂಗಳೂರಿನ ಸೇತ್ರಾವತಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದರು. ಅಲ್ಲದೇ ಮೂವರು ಮಂಗಳೂರಿನಲ್ಲಿ ಲಷ್ಕರ್ ಉಗ್ರರ ಪರ ಗೋಡೆ ಬರಹ ಬರೆದಿದ್ದರು ಎನ್ನಲಾಗಿದೆ.