Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

    December 9, 2023
    Share

    ಮಂಗಳೂರು: ನಗರದ ಕದ್ರಿ ಪಾರ್ಕ್ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಎಮ್ ಡಿಎಮ್ ಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ನಿಷೇದಿತ ಮಾದಕ ವಸ್ತು ಸಹಿತ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದಿದ್ದಾರೆ.  

    ಮಂಜೇಶ್ವರ ಪಾವೂರು ಗ್ರಾಮದ ಮಚ್ಚಂಪಾಡಿ ನಿವಾಸಿ ನವಾಜ್(40), ಬಂಟ್ವಾಳ ಫರಂಗಿಪೇಟೆಯ ಪುದು ಗ್ರಾಮದ ಜುಮಾದಿ ಗುಡ್ಡೆ ಮನೆ ನಿವಾಸಿ ಅಜರುದ್ದೀನ್ ಯಾನೆ ಅಜರ್(38) ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರಿಂದ 120 ಗ್ರಾಂ ತೂಕದ 6,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-3, ಡಿಜಿಟಲ್ ತೂಕ ಮಾಪನ, ಸುಝುಕಿ ಅಕ್ಸಿಸ್ ಸ್ಕೂಟರ್ ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 6,83,120 ರೂ. ಎಂದು ಅಂದಾಜಿಸಲಾಗಿದೆ.ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.ಆರೋಪಿಗಳ ಪೈಕಿ ನವಾಸ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ. ಮತ್ತೋರ್ವ ಆರೋಪಿ ಅಜರುದ್ದೀನ್‌ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದಂತೆ ಒಂದು ಪ್ರಕರಣ, ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ಹಾಗೂ ಎರಡು ಕಳ್ಳತನ ಪ್ರಕರಣಗಳಂತೆ ಹೀಗೆ ಒಟ್ಟು 5 ಪ್ರಕರಣಗಳು ದಾಖಲಾಗಿವೆ.ಆರೋಪಿಗಳ ಮತ್ತು ಮಾದಕ ವಸ್ತು ಪತ್ತೆ ಕಾರ್ಯವನ್ನು ಮಂಗಳೂರು ನಗರದ ಮಾನ್ಯ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ, ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಾಚರಣೆ ನಡೆಸಿದ್ದಾರೆ.

    Post Views: 156

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.