Facebook Twitter Instagram
    Friday, August 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!

    August 14, 2026
    Share

    ಬಂಟ್ವಾಳ: ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದು, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು, ಮೊಬೈಲ್‌ಗಳು ಸೇರಿದಂತೆ ಒಟ್ಟು ₹4.90 ಲಕ್ಷ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಆ.12ರಂದು ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಯಶ್ ಕುಮಾರ್ ಶರ್ಮಾ, ಐಪಿಎಸ್ ಅವರ ನೇತೃತ್ವದಲ್ಲಿ ಬಂಟ್ವಾಳ ಕಾವಳಪಡೂರು ಎಂಬಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ವೇಳೆ ಸುಮಾರು ₹2.25 ಲಕ್ಷ ಮೌಲ್ಯದ 22.57 ಗ್ರಾಂ ಎಂಡಿಎಂಎ, 30.34 ಗ್ರಾಂ ಗಾಂಜಾ, ಡ್ರಗ್ಸ್ ಸಾಗಾಟಕ್ಕೆ ಬಳಸಿದ ಕಾರು ಹಾಗೂ ಐದು ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಆರೋಪಿಗಳನ್ನು ಅಡ್ಯಾರ್ ಮಂಗಳೂರಿನ ನಾಶೀರ್ ಹುಸೇನ್ (37), ಗೋಳ್ತಮಜಲಿನ ಮಹಮ್ಮದ್ ಜುನೈದ್ (38) ಹಾಗೂ ಕಂಕನಾಡಿಯ ಮೊಹಮ್ಮದ್ ಅಫ್ರೀದಿ (24) ಎಂದು ಗುರುತಿಸಲಾಗಿದೆ.ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆಯ ಕಲಂ 8(C) ಜೊತೆಗೆ 22(C) ಅಡಿಯಲ್ಲಿ ತನಿಖೆ ಮುಂದುವರಿದಿದೆ.

    ಕಾರ್ಯಾಚರಣೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ನಿರೀಕ್ಷಕ ಅನಂತ ಪದ್ಮನಾಭ ಕೆ.ವಿ., ಪಿಎಸ್‌ಐ ರನ್ನ ಗೌಡ ಎಸ್. ಪಾಟೀಲ್, ಪ್ರೊಬೇಷನರಿ ಪಿಎಸ್‌ಐಗಳಾದ ಶಿವರಾಮ್, ಫಕೀರಪ್ಪ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್ ಮತ್ತು ಸಂಪತ್ ಸಹಕರಿಸಿದರು.

    Post Views: 6

    Related Posts

    ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

    August 14, 2026

    ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

    August 13, 2026

    ಮಂಗಳೂರು: ಜ್ಯುವೆಲ್ಲರಿ ಉದ್ಯಮಿ ದರೋಡೆ ಪ್ರಕರಣ-ಮತ್ತೆ ನಾಲ್ವರು ಅರೆಸ್ಟ್!

    August 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಡಬ: ಕಾಲೇಜು ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ ಬೆದರಿಕೆ- ಪ್ರಕರಣ ದಾಖಲು

    August 14, 2026

    ಬಂಟ್ವಾಳ: ಎಂಡಿಎಂಎ, ಗಾಂಜಾ ಸಹಿತ ₹4.90 ಲಕ್ಷ ಮೌಲ್ಯದ ವಸ್ತುಗಳು ವಶ..!!

    August 14, 2026

    ಮಂಗಳೂರಿನ ಹೆಸರಾಂತ ಶೆಟ್ಟಿ ಟ್ರೇಡರ್ಸ್ ಮಾಲಕ ಧರ್ಮೇಂದ್ರ ಶೆಟ್ಟಿ ನಿಧನ

    August 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.