Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಗಾಂಜಾ ಮಾರಾಟ ಮಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ
    ಕ್ರೈಂ ಸ್ಟೋರಿ

    ಗಾಂಜಾ ಮಾರಾಟ ಮಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಸಹಿತ ಮೂವರ ಬಂಧನ

    April 15, 2023
    Share

    ಮಂಗಳೂರು: ನಗರದಲ್ಲಿ ಕಾಲೇಜು ವಿದ್ಯಾರ್ಥಿಗಳು, ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಗೆ ಹಾಗು ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೆಡಿಕಲ್ ವಿದ್ಯಾರ್ಥಿಸಹಿತ ಮೂರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಮತ್ತು ಮಂಗಳೂರು ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದು, 1,40,000 ರೂ ಮೌಲ್ಯದ 5 ಕೆಜಿ 400 ಗ್ರಾಂ ಗಾಂಜಾ ಹಾಗೂ 4 ಮೊಬೈಲ್ ಫೋನ್ ಗಳನ್ನು ಮತ್ತು 1 ಟ್ಯಾಬ್ ವಶಪಡಿಸಿಕೊಳ್ಳಲಾಗಿದೆ.

    ಬೀದರ್ ನಿವಾಸಿ ಸದ್ಯ ನಗರದ ಗೋರಿಗುಡ್ಡೆಯಲ್ಲಿ ವಾಸವಿರುವ ಪ್ರಜ್ವಲ್ ಫಿನಹಾಸ್(26), ಮೂಲತ: ಹಾಸನ ಜಿಲ್ಲೆಯ ಸದ್ಯ ನಗರದ ಕುಲಶೇಖರದ ಅಪಾರ್ಟ್ಮೆಂಟ್‌ನಲ್ಲಿ ಇರುವ ಧ್ರುವ ಶೆಟ್ಟಿ (19) , ನಗರದ ಕುಳಾಯಿ ನಿವಾಸಿ ಶಿವಾನಿ (22) ಬಂಧಿತರು.

    ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯ ಪಿಎಸ್‌ಐ ಶೀತಲ್‌ ಅಲಗೂರು ಅವರಿಗೆ ಬಂದ ಮಾಹಿತಿ ಮೇರೆಗೆ ಆರೋಪಿ ಪ್ರಜ್ವಲ್ ಫಿನಹಾಸ್​ನನ್ನು ಬಂಧಿಸಿ ಆತನ ನೀಡಿದ ಮಾಹಿತಿ ಮೇರೆಗೆ ಉಳಿದ ಆರೋಪಿಗಳನ್ನು ಸಿಸಿಬಿ ಘಟಕದ ಅಧಿಕಾರಿ ಸಿಬ್ಬಂದಿ ಬಂಧಿಸಿದ್ದರು. ಆರೋಪಿಗಳ ಪೈಕಿ ಪ್ರಜ್ವಲ್ ಫಿನಹಾಸ್ ಎಂಬಾತ ಮಹಾರಾಷ್ಟ್ರ ರಾಜ್ಯದಿಂದ ಗಾಂಜಾ ಖರೀದಿಸಿ ಮಂಗಳೂರಿನಲ್ಲಿ ಆತನ ಸ್ನೇಹಿತ ಧ್ರುವ ಶೆಟ್ಟಿ ಮತ್ತು ಶಿವಾನಿಗೆ ನೀಡಿ ಅವರ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದನು.

    Post Views: 268

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026

    ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಇಬ್ಬರು ಆರೋಪಿಗಳು ಪೊಲೀಸರ ಬಲೆಗೆ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.