Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಸಭೆ
    ಇತ್ತೀಚಿನ ಸುದ್ದಿ

    ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಸಭೆ

    September 28, 2023
    Share

    ಮಂಗಳೂರು: ಜೀವಕಂಟಕವಾಗುತ್ತಿರುವ ಸಿಟಿ ಬಸ್ ಗಳ ಅಟಾಟೋಪಗಳಿಗೆ ಕಡಿವಾಣ ಹಾಕಲು ಬಸ್ ಮಾಲಕರೊಂದಿಗೆ ಸಭೆ ನಡೆಸಿ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಖಡಕ್ ವಾರ್ನಿಂಗ್ ನೀಡಿದರು.

    ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಬುಧವಾರ ನಡೆದ ಈ ಸಭೆಯಲ್ಲಿ ಆರ್ ಟಿ ಒ ಅಧಿಕಾರಿ, ಮನಪಾ ಇಂಜಿನಿಯರ್, ಎನ್ಎಚ್ಒ ಅಧಿಕಾರಿ, ಸ್ಮಾರ್ಟ್ ಸಿಟಿ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಿಟಿ ಬಸ್ ಗಳೊಂದಿಗೆ ಸಭೆ ನಡೆಸಲಾಗಿದೆ. ಬಸ್ ಮಾಲಕರೊಂದಿಗೆ ಬಹಳಷ್ಟು ಸಭೆಗಳು ನಡೆದಿದ್ದರೂ, ಇದೇ ಮೊದಲ ಬಾರಿಗೆ ಕಳೆದ ಕೆಲದಿನಗಳಲ್ಲಿ ನಡೆದಿರುವ ಅಪಘಾತಗಳನ್ನು, ಅಡ್ಡಾದಿಡ್ಡಿ ಬಸ್ ಗಳ ಸಂಚಾರ, ನಿರ್ಲಕ್ಷ್ಯದ ಚಾಲನೆಗಳ ಬಗ್ಗೆ ವೀಡಿಯೋ ಮೂಲಕ ಬಸ್ ಮಾಲಕರಿಗೆ ಮನದಟ್ಟು ಮಾಡಲಾಯಿತು.

    ಇತ್ತೀಚಿಗೆ ನಡೆದ ವಿವಿಧ ಭೀಕರ ಅಪಘಾತಗಳ ವೀಡಿಯೋಗಳನ್ನು ತೋರಿಸಿ ಬಸ್ ಮಾಲೀಕರಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡರು. ಅತಿವೇಗದ ಚಾಲನೆ, ನಿರ್ಲಕ್ಷ್ಯದ ಚಾಲನೆ, ಟೈಮ್ ಕೀಪಿಂಗ್ ಹಾಗೂ ಸಂಚಾರ ನಿಯಮಗಳ ಉಲ್ಲಂಘನೆ ಬಗ್ಗೆ ಎಚ್ಚರಿಕೆ ನೀಡಿ, ಬಸ್ ಟೈಮಿಂಗ್ ರೇಷನಲೈಜ್ ಮಾಡುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಬಸ್ ಮಾಲಕರು ತಮ್ಮ ಚಾಲಕ ಹಾಗೂ ನಿರ್ವಾಹಕರಿಗೆ ಸ್ಪಷ್ಟ ಎಚ್ಚರಿಕೆ ನೀಡಬೇಕು. ಇಲ್ಲವಾದಲ್ಲಿ ಚಾಲಕರ ಚಾಲನ ಪರವಾನಿಗೆ ರದ್ದು ಮಾಡಲಾಗುವುದು. ಈ ವರ್ಷ ಸುಮಾರು 90 ಮಂದಿಯ ಚಾಲನ ಪರವಾನಿಗೆ ರದ್ದು ಮಾಡಲಾಗಿದೆ.

    ಮುಂದೆ ಪರಿಸ್ಥಿತಿ ಇದೆ ರೀತಿ ಮುಂದುವರೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಫುಟ್ ಬೋರ್ಡ್ ಮೇಲೇ ಪ್ರಯಾಣಿಕರು ನಿಲ್ಲಲು ಅವಕಾಶ ನೀಡಬಾರದು. ಫುಟ್ ಬೋರ್ಡ್ ಗೆ ಬಾಗಿಲು ಹಾಕುವ ಬಗ್ಗೆ ಚಿಂತನೆ ನಡೆಸಬೇಕು. ಸಾರ್ವಜನಿಕರಲ್ಲೂ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಬಸ್ ಮಾಲಕರಿಗೆ ಅವಶ್ಯವಿರುವ ಕಡೆಗೆ ನಾವೇ ಹೋಮ್ ಗಾರ್ಡ್ಸ್ ವ್ಯವಸ್ಥೆ ಅಳವಡಿಸಲಾಗುತ್ತದೆ‌‌ ಎಂದು ಪೊಲೀಸ್ ಕಮಿಷನರ್ ಹೇಳಿದರು.

    ಅಲ್ಲದೆ ರಸ್ತೆ ಕಾಮಗಾರಿಯಿಂದಾಗಿ ಅಪಘಾತ ಸಂಭವಿಸಿದ್ದು ಹೌದಾದಲ್ಲಿ ಆ ಕಾಮಗಾರಿ ನಡೆಸುತ್ತಿರುವ ಇಂಜಿನಿಯರ್ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಸಭೆಯಲ್ಲಿ ಚರ್ಚಿಸಲಾಗಿರುವ ವಿವಿಧ ಸಮಸ್ಯೆಗಳು ಪರಿಹಾರ ಕಾಣುವಂತಾಗಬೇಕು.

    ಮುಂದಿನ ತಿಂಗಳು ಮತ್ತೆ ಸಭೆ ಕರೆದು ಪರಿಶೀಲಿಸಲಾಗುವುದು. ಆದ್ದರಿಂದ ಆದಷ್ಟು ಶೀಘ್ರ ಇಂದು ನಿರ್ಣಯಿಸಿದ ವಿಚಾರ ತುರ್ತು ಕಾರ್ಯರೂಪಕ್ಕೆ ಬರುವಂತಾಗಬೇಕು ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗರ್ ವಾಲ್ ಸೂಚನೆ ನೀಡಿದರು.

    Post Views: 212

    Related Posts

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮೊಡಂಕಾಪು: ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

    July 27, 2026

    ನಕಲಿ ನೋಟು ಮುದ್ರಣ ಪ್ರಕರಣ: ಆರೋಪಿಗಳ ಬಾಡಿಗೆ ಮನೆಯಲ್ಲಿ ಪ್ರಿಂಟರ್, ಕೆಮಿಕಲ್ ಪತ್ತೆ

    July 27, 2026

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.