Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
    ಇತ್ತೀಚಿನ ಸುದ್ದಿ

    ‘ಋತುಚಕ್ರ ರಜೆಗೆ’ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

    December 9, 2025
    Share

    ಬೆಂಗಳೂರು : ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಇದೀಗ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ತಡೆಯಾಜ್ಜೆ ನೀಡಲಾಗಿದೆ. ನವೆಂಬರ್ 20ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು.

    ವಿಚಾರಣೆಯ ವೇಳೆ ಕಾಯ್ದೆಯಲ್ಲಿ ಇಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ. ಸರ್ಕಾರದ ಏಕಪಕ್ಷ ಆದೇಶದಿಂದ ಹೋಟೆಲ್ ಗಳಿಗೆ ಸಮಸ್ಯೆ ಆಗಿದೆ ಎಂದು ಅಸೋಸಿಯೇಷನ್ ಪರ ವಕೀಲರು ವಾದಿಸಿದರು. ಆದೇಶಕ್ಕೆ ಮುನ್ನ ಸಂಘಟನೆಗಳ ಅಭಿಪ್ರಾಯ ಪಡೆಯಲಾಗಿದೆಯ? ಎಂದು ಜಡ್ಜ್ ಪ್ರಶ್ನಿಸಿದರು.

    ಈ ವೇಳೆ ಅಸೋಸಿಯೇಷನ್ ಪರ ವಕೀಲರು ಇಲ್ಲ ಎಂದು ಉತ್ತರಿಸಿದರು. ಬಳಿಕ ಹೈಕೋರ್ಟ್ ಮುಂದಿನ ವಿಚಾರಣೆಯವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಿತು. ಮಧ್ಯಂತರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸಲು ಸರ್ಕಾರ ಸ್ವತಂತ್ರ ಎಂದು ಇದೆ ವೇಳೆ ಹೈಕೋರ್ಟ್ ಏಕ ಸದಸ್ಯ ಪೀಠ ಅಭಿಪ್ರಾಯಪಟ್ಟಿತು.

    Post Views: 121

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.