Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗೋವಾದಿಂದ ಮಾದಕದ್ರವ್ಯ ಕೋಕೆನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆಯ ಸೆರೆ
    ಇತ್ತೀಚಿನ ಸುದ್ದಿ

    ಮಂಗಳೂರು: ಗೋವಾದಿಂದ ಮಾದಕದ್ರವ್ಯ ಕೋಕೆನ್ ಪೂರೈಸುತ್ತಿದ್ದ ನೈಜೇರಿಯಾ ಪ್ರಜೆಯ ಸೆರೆ

    December 18, 2024
    Share

    ಮಂಗಳೂರು: ಗೋವಾದಿಂದ ಮಂಗಳೂರಿಗೆ ನಿಷೇಧಿತ ಮಾದಕದ್ರವ್ಯ ಕೋಕೇನ್ ಪೂರೈಸುತ್ತಿದ್ದ ನೈಜೀರಿಯಾ ದೇಶದ ಪ್ರಜೆಯನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು ಆತನಿಂದ 30 ಗ್ರಾಂ ಕೋಕೆನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

    ನೈಜೀರಿಯಾ ದೇಶದ ಪ್ರಜೆ, ಸದ್ಯ ಗೋವಾದಲ್ಲಿ ವಾಸ್ತವ್ಯವಿರುವ ಮೈಕೆಲ್ ಒಕಾಫಾರ್ ಒಡಿಕ್ಪೊ(44) ಬಂಧಿತ ಆರೋಪಿ. 2024ರ ಮಾರ್ಚ್‌ನಲ್ಲಿ ಗೋವಾದಿಂದ ಕೋಕೆನ್ ಅನ್ನು ಖರೀದಿಸಿಕೊಂಡು ಬಂದು ಉಳ್ಳಾಲದ ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡುತ್ತಿದ್ದ ಅಂಬ್ಲಮೊಗರು ನಿವಾಸಿಗಳಾದ ಸದಕತ್ ಯು. ಹಾಗೂ ಮಹಮ್ಮದ್ ಅಶ್ಫಕ್ ಎಂಬವರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದರು‌. ಈ ವೇಳೆ ಅವರಲ್ಲಿದ್ದ 34 ಗ್ರಾಂ ಕೋಕೆನ್ ಸೇರಿದಂತೆ 2,72,000ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

    ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಿಗೆ ಕೊಕೇನ್ ನೀಡಿದ ಗೋವಾದ ಡ್ರಗ್ ಪೆಡ್ಲರ್ ಬಗ್ಗೆ ಮಾಹಿತಿ ಸಂಗ್ರಹಿಸಿದ ಮಂಗಳೂರು ಸಿಸಿಬಿ ಪೊಲೀಸರು ಗೋವಾ ರಾಜ್ಯದ ಉತ್ತರ ಗೋವಾದ ಕಾಲನ್ ಗೂಟ್ ಎಂಬಲ್ಲಿಗೆ ಆರೋಪಿ ಪತ್ತೆ ಬಗ್ಗೆ ಹೋಗಿ ನೈಜೇರಿಯಾ ದೇಶದ ಪ್ರಜೆಯನ್ನು ಬಂಧಿಸಿದ್ದಾರೆ. ಬಂಧಿತನಿಂದ 30 ಗ್ರಾಂ ಕೋಕೇನ್, ಸಾಗಾಟಕ್ಕೆ ಉಪಯೋಗಿಸಿದ ಬೊಲೆನೋ ಕಾರು, 2 ಮೊಬೈಲ್ ಫೋನ್‌ಗಳು, 4500ರೂ ಹಣ, ಡಿಜಿಟಲ್ ತೂಕ ಮಾಪನವನ್ನು ಸ್ವಾಧೀನಪಡಿಸಿಕೊಳ್ಳಲಾಗಿರುತ್ತದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 11,25,000ರೂ. ಆಗಿರುತ್ತದೆ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಸೆನ್ ಕ್ರೈಂ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಈತನ ವಿರುದ್ದ ಈಗಾಗಲೇ ಗೋವಾದಲ್ಲಿ ಒಟ್ಟು 3 ಮಾದಕವಸ್ತು ಮಾರಾಟ ಪ್ರಕರಣ ದಾಖಲಾಗಿದೆ.

    Post Views: 199

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.