Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸೌಜನ್ಯಾ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ..!! ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಸೌಜನ್ಯಾ ಹೆಸರಿನಲ್ಲಿ ಲಕ್ಷ ಲಕ್ಷ ವಂಚನೆ..!! ಪ್ರಕರಣ ದಾಖಲು

    June 22, 2025
    Share

    ಮಂಗಳೂರು: ಸೌಜನ್ಯ ಹೆಸರಿನಲ್ಲಿ ಹೆಲ್ಪ್ ಲೈನ್ ತೆರೆದು ಲಕ್ಷ ಲಕ್ಷ ರೂಪಾಯಿ ವಂಚನೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ಸಂಧ್ಯಾ ಪವಿತ್ರ ನಾಗರಾಜ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್​ನ ಮಾಲಾಡಿ ನಿವಾಸಿ ಕೆ.ರಾಜೇಶ್ ಎಂಬುವರು ನೀಡಿದ ದೂರಿನ‌ ಅನ್ವಯ ಪ್ರಕರಣ ದಾಖಲಾಗಿದೆ.

    ದೂರುದಾರ ರಾಜೇಶ್ ವೃತ್ತಿಯಲ್ಲಿ ಗಾಯಕರಾಗಿದ್ದು, ಅರವಿಂದ್ ವಿವೇಕ್​ ಎಂಬ ಫೇಸ್​ಬುಕ್​ ಪೇಜ್​​ನಲ್ಲಿ ರಾಜೇಶ್ ಲೈವ್ ಸಂಗೀತ ಕಾರ್ಯಕ್ರಮ ನೀಡುತ್ತಿದ್ದರು. ರಾಜೇಶ್​ ಅವರಿಗೆ ಸಂಧ್ಯಾ 2024ರಲ್ಲಿ ಫೇಸ್​ಬುಕ್​ ಮೂಲಕ ಪರಿಚಯವಾಗಿದ್ದಾಳೆ. ಸೌಜನ್ಯ ಹೆಲ್ಪ್​​ಲೈನ್​ ಹೆಸರಿನಲ್ಲಿ ವಂಚನೆಗೊಳಗಾದವರಿಗೆ ನೆರವು ನೆರವಾಗುತ್ತಿದ್ದೇನೆ. ಅಮಾಯಕರ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ಬಗೆಹರಿಸಿದ್ದೇನೆ ಅಂತ ರಾಜೇಶ್​ ಅವರಿಗೆ ನಂಬಿಸಿದ್ದಾಳೆ.

    ಆಗ, ರಾಜೇಶ್​ ಅವರು ಬಂಟ್ವಾಳ‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಸಂಧ್ಯಾ ಪವಿತ್ರ ನಾಗರಾಜ್​ಗೆ ತಿಳಿಸಿದ್ದಾರೆ. ಆಗ, ಸಂಧ್ಯಾ ಹೈಕೋರ್ಟ್​ನಲ್ಲಿ ಕೇಸ್ ಬಗೆಹರಿಸುತ್ತೇನೆ, ಆದರೆ, ಸ್ವಲ್ಪ ಖರ್ಚು ಇದೆ ಎಂದಿದ್ದಾಳೆ. ನಂತರ, ರಾಜೇಶ್​ ಅವರಿಂದ ಸಂಧ್ಯಾ ಹಂತ ಹಂತವಾಗಿ 3.20 ಲಕ್ಷ ರೂ. ಪಡೆದಿದ್ದಾಳೆ. ಹಣ ನೀಡಿದ ನಂತರವೂ ಸಮಸ್ಯೆ ಬಗೆಹರಿಯದ ಕಾರಣ ರಾಜೇಶ್​ ಅವರು ಸಂಧ್ಯಾಗೆ ಪ್ರಶ್ನಿಸಿದ್ದಾರೆ.

    ಆಗ, ಸಂಧ್ಯಾ ಇನ್ನೂ ಹೆಚ್ಚಿನ ಹಣ ನೀಡುವಂತೆ ಸಂಧ್ಯಾ ಹೇಳಿದ್ದಾಳೆ. ಸಂಧ್ಯಾ ಮಾತು ಕೇಳಿ ಸಂಶಯಗೊಂಡ ರಾಜೇಶ್​ ಅವರು ಕೋರ್ಟ್​ಗೆ ಸಲ್ಲಿಸಿರುವ ದಾಖಲೆಗಳ ಬಗ್ಗೆ ಕೇಳಿದ್ದಾರೆ. ಸಂಧ್ಯಾ ಕೈಕಾಲು ಮುರಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಬಳಿಕ ರಾಜೇಶ್​ ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರು ದಾಖಸಿದ್ದಾರೆ. ಬಿಎನ್​ಎಸ್​ ಕಾಯ್ದೆ 318(4) ಮತ್ತು 351(2) ಸೆಕ್ಷನ್ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 319

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.