Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ – ಮಾಲಕನಿಗೆ 25,000 ರೂ. ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ – ಮಾಲಕನಿಗೆ 25,000 ರೂ. ದಂಡ

    December 14, 2025
    Share

    ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ.

    ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು.

    ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್‌ ಐ ರೋಸಮ್ಮ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‌ಸಿ ಎಂಟನೇ ನ್ಯಾಯಾಲಯದ ನ್ಯಾಯಾಧೀಶ ಫವಾಝ್ ಪಿ.ಎ. ಅವರು ಅಪ್ರಾಪ್ತನಿಗೆ ಚಲಾಯಿಸಲು ಸ್ಕೂಟರ್ ನೀಡಿದ ಮಾಲಕ ಅಬ್ದುಲ್ ಹಮೀದ್‌ಗೆ 25,000 ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.

    Post Views: 209

    Related Posts

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.