Facebook Twitter Instagram
    Wednesday, June 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮದುವೆ ನಿರಾಕರಿಸಿದ ಪ್ರಿಯಕರನಿಂದ ಮನನೊಂದ ಅಪ್ರಾಪ್ತೆ ಆತ್ಮಹತ್ಯೆ; ಪೊಕ್ಸೊ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮದುವೆ ನಿರಾಕರಿಸಿದ ಪ್ರಿಯಕರನಿಂದ ಮನನೊಂದ ಅಪ್ರಾಪ್ತೆ ಆತ್ಮಹತ್ಯೆ; ಪೊಕ್ಸೊ ಪ್ರಕರಣ ದಾಖಲು

    June 24, 2026
    Share

    ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಬ್ಬಳನ್ನು ಗರ್ಭಿಣಿಯಾಗಿಸಿ, ಬಳಿಕ ಮದುವೆಯಾಗಲು ನಿರಾಕರಿಸಿ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಘಟನೆಗೆ ಸಂಬಂಧಿಸಿದಂತೆ ಗಂಜಿಮಠ ಮೂಲದ ಮನೀಶ್ ಪೂಜಾರಿ ಎಂಬಾತನ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ.

    ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಮನೀಶ್ ಪೂಜಾರಿ ಅಪ್ರಾಪ್ತ ಬಾಲಕಿಗೆ ಪ್ರೀತಿಯ ನಂಬಿಕೆ ಮೂಡಿಸಿ ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದನು. ಇದರ ಪರಿಣಾಮವಾಗಿ ಬಾಲಕಿ ಗರ್ಭಿಣಿಯಾಗಿದ್ದಳು. ಈ ವಿಷಯವನ್ನು ಬಾಲಕಿಯು ಮನೀಶ್‌ಗೆ ತಿಳಿಸಿ ತನ್ನನ್ನು ಮದುವೆಯಾಗುವಂತೆ ಕೋರಿದಾಗ, ಆರೋಪಿಯು ಆಕೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಜವಾಬ್ದಾರಿಯಿಂದ ನುಣುಚಿಕೊಂಡು ತಿರಸ್ಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

    ಆರೋಪಿಯಿಂದ ತೀವ್ರ ಅವಮಾನ ಹಾಗೂ ವಂಚನೆಗೆ ಒಳಗಾದ ಬಾಲಕಿಯು, ಜೂನ್ 22ರಂದು ತನ್ನ ತಾಯಿಗೆ ನಡೆದಿರುವ ಎಲ್ಲಾ ವಿಚಾರಗಳನ್ನು ತಿಳಿಸಿ ಕಣ್ಣೀರು ಹಾಕಿದ್ದಳು. ಈ ವೇಳೆ ತಾಯಿ ಆಕೆಗೆ ಧೈರ್ಯ ತುಂಬಿ, ಸಮಾಧಾನಪಡಿಸಿದ್ದರು. ಆದರೆ, ಮರುದಿನ ಅಂದರೆ ಮಂಗಳವಾರ ಬೆಳಿಗ್ಗೆ ತಾಯಿ ಎಂದಿನಂತೆ ಕೆಲಸಕ್ಕೆ ತೆರಳಿದ್ದರು. ಸಂಜೆ ಅವರು ಕೆಲಸ ಮುಗಿಸಿ ಮನೆಗೆ ಹಿಂದಿರುಗಿದಾಗ ಬಾಲಕಿಯು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

    ಮಗಳ ಹಠಾತ್ ಸಾವಿನಿಂದ ಆಘಾತಕ್ಕೊಳಗಾದ ತಾಯಿ ಸುರತ್ಕಲ್ ಪೊಲೀಸ್ ಠಾಣೆಗೆ ಧಾವಿಸಿ ಆರೋಪಿ ವಿರುದ್ಧ ದೂರು ನೀಡಿದ್ದಾರೆ. ದೂರಿನ ಅನ್ವಯ ಪೊಲೀಸರು ಆರೋಪಿ ಮನೀಶ್ ಪೂಜಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಲಂಗಳು ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಗಂಭೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ

    Post Views: 6

    karnataka PoliceInvestigation

    Related Posts

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026

    ಅಪಘಾತದ ನಾಟಕ ರಚಿಸಿ ತಮ್ಮನ ಕೊಲೆ ಮಾಡಿದ ಅಣ್ಣ; ಎಲ್‌ಐಸಿ ಹಣಕ್ಕಾಗಿ ಸಂಚು

    June 24, 2026

    ಮಂಗಳೂರು: OLX ಮೂಲಕ ಐಷಾರಾಮಿ ಬೈಕ್ ಮೋಸ; ಹಣ ಕಳೆದುಕೊಂಡ ತಂದೆ-ಮಗ

    June 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    114 ವರ್ಷಗಳ ಇತಿಹಾಸವಿರುವ ಎಂಸಿಸಿ ಬ್ಯಾಂಕ್, ರೂ.1,535 ಕೋಟಿ ವ್ಯವಹಾರ : 22ನೇ ಶಾಖೆ ದೇರಳಕಟ್ಟೆ ಮತ್ತು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

    June 24, 2026

    ಮದುವೆ ನಿರಾಕರಿಸಿದ ಪ್ರಿಯಕರನಿಂದ ಮನನೊಂದ ಅಪ್ರಾಪ್ತೆ ಆತ್ಮಹತ್ಯೆ; ಪೊಕ್ಸೊ ಪ್ರಕರಣ ದಾಖಲು

    June 24, 2026

    ಅಪಘಾತದ ನಾಟಕ ರಚಿಸಿ ತಮ್ಮನ ಕೊಲೆ ಮಾಡಿದ ಅಣ್ಣ; ಎಲ್‌ಐಸಿ ಹಣಕ್ಕಾಗಿ ಸಂಚು

    June 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.