Facebook Twitter Instagram
    Friday, October 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!
    ಇತ್ತೀಚಿನ ಸುದ್ದಿ

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026
    Share

    ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು ಲಾಡ್ಜ್‌ಗೆ ತೆರಳುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಬಲವಂತವಾಗಿ ಅಪಹರಿಸಿ, ಸುಮಾರು ಎರಡು ಗಂಟೆಗಳ ಕಾಲ ನಗರದ ವಿವಿಧೆಡೆ ಸುತ್ತಾಡಿಸಿ ಬರೋಬ್ಬರಿ 1.15 ಕೋಟಿ ರೂಪಾಯಿ ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ದೋಚಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

    ದಾವಣಗೆರೆಯಿಂದ ಮಂಗಳೂರಿಗೆ ಹಣದ ಬ್ಯಾಗ್‌ಗಳನ್ನು ತಂದಿದ್ದ ಸತ್ಯನಾರಾಯಣ ಎಂಬುವವರೇ ದರೋಡೆಕೋರರ ಟಾರ್ಗೆಟ್ ಆಗಿದ್ದಾರೆ. ಅಕ್ಟೋಬರ್ 23ರಂದು ಶಿವಮೊಗ್ಗದ ಗಾಂಧಿ ಬಜಾರ್ ನಿವಾಸಿ ನಾಗರಾಜ್ ಎಂಬುವವರು ಸತ್ಯನಾರಾಯಣ ಅವರಿಗೆ ಹಣದ ಬ್ಯಾಗ್‌ಗಳನ್ನು ನೀಡಿ, ಮಂಗಳೂರಿಗೆ ತೆರಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಲಾಡ್ಜ್‌ನಲ್ಲಿ ಉಳಿದುಕೊಳ್ಳುವಂತೆ ಸೂಚಿಸಿದ್ದರು.

    ಅದರಂತೆ ಅಕ್ಟೋಬರ್ 27ರಂದು ರಾತ್ರಿ ದಾವಣಗೆರೆಯಿಂದ ಬಸ್ ಹತ್ತಿದ್ದ ಸತ್ಯನಾರಾಯಣ, ಅಕ್ಟೋಬರ್ 28ರಂದು ಬೆಳಗ್ಗೆ ಸುಮಾರು 6 ಗಂಟೆಗೆ ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಲಾಲ್‌ಬಾಗ್‌ನ ರಾಮಕೃಷ್ಣ ಹಾಸ್ಟೆಲ್ ಬಳಿ ಇಳಿದಿದ್ದರು.

    ಬಳಿಕ ಫುಟ್‌ಪಾತ್‌ನಲ್ಲಿ ತಿಂಡಿ ತಿನ್ನಲು ತೆರಳುತ್ತಿದ್ದ ವೇಳೆ ಕಪ್ಪು ಬಣ್ಣದ ಕಾರಿನಲ್ಲಿ ಬಂದ ಮುಖಕ್ಕೆ ಮಫ್ಲರ್ ಧರಿಸಿದ್ದ ನಾಲ್ವರು ಅಪರಿಚಿತರು ಅವರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಅಪಹರಿಸಿದ್ದಾರೆ.

    ಸುಮಾರು ಎರಡು ಗಂಟೆಗಳ ಕಾಲ ಕಾರಿನಲ್ಲಿ ನಗರದ ವಿವಿಧೆಡೆ ಸುತ್ತಾಡಿಸಿದ ದುಷ್ಕರ್ಮಿಗಳು, ಸತ್ಯನಾರಾಯಣ ಅವರ ಬಳಿಯಿದ್ದ ಎರಡು ಬ್ಯಾಗ್‌ಗಳಲ್ಲಿನ ಕೋಟ್ಯಂತರ ರೂಪಾಯಿ ನಗದು ಹಣ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಕಿತ್ತುಕೊಂಡಿದ್ದಾರೆ.

    ನಂತರ ಬೆಳಗ್ಗೆ ಸುಮಾರು 8 ಗಂಟೆಯ ವೇಳೆಗೆ ಕಾವೂರು ಬಸ್ ನಿಲ್ದಾಣದ ಸಮೀಪದ ನಿರ್ಜನ ಗುಡ್ಡದ ಮೇಲೆ ಸತ್ಯನಾರಾಯಣ ಅವರನ್ನು ಕಾರಿನಿಂದ ಕೆಳಕ್ಕೆ ತಳ್ಳಿ, ಜೀವ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ.

    ಘಟನೆಯಿಂದ ಆಘಾತಕ್ಕೊಳಗಾದ ಸತ್ಯನಾರಾಯಣ ಅವರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಪೊಲೀಸರು, ಕಾರಿನಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳ ಪತ್ತೆಗೆ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

    ನಗರದ ಪ್ರಮುಖ ರಸ್ತೆಗಳ ಸಿಸಿಟಿವಿ ದೃಶ್ಯಾವಳಿಗಳು ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.

    Post Views: 1

    Related Posts

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026

    ಲಾಡ್ಜ್ ನಲ್ಲಿ ಎಂಡಿಎಂಎ ಸಹಿತ ಯುವತಿ ಮತ್ತು ಯುವಕ ಅರೆಸ್ಟ್!!

    October 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು : ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದ ವ್ಯಕ್ತಿಯ ಅಪಹರಣ, 1.15 ಕೋಟಿ ರೂ. ಹಣ ದೋಚಿದ ದುಷ್ಕರ್ಮಿಗಳು!

    October 30, 2026

    ಮದ್ರಸಾ ಶಿಕ್ಷಕನಿಂದ ವಿದ್ಯಾರ್ಥಿನಿಯೊಂದಿಗೆ ಮದುವೆ; ಮೊದಲ ಮದುವೆ ವಿಚಾರ ಮರೆಮಾಚಿ ಯುವತಿಯನ್ನು ವರಿಸಿದ 40ರ ಧರ್ಮಗುರು

    October 30, 2026

    ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ್ದಕ್ಕೆ ಬ್ಲ್ಯಾಕ್‌ಮೇಲ್ ಆರೋಪ – ₹42.97 ಲಕ್ಷ ಸುಲಿಗೆ, ಇಬ್ಬರ ಬಂಧನ

    October 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.