Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಬಂದರಿನಿಂದ ಹೊರಟ ತೈಲನೌಕೆ ಮೇಲೆ ಕ್ಷಿಪಣಿ ದಾಳಿ..!
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿನಿಂದ ಹೊರಟ ತೈಲನೌಕೆ ಮೇಲೆ ಕ್ಷಿಪಣಿ ದಾಳಿ..!

    December 15, 2023
    Share

    ಮಂಗಳೂರು: ನವಮಂಗಳೂರು ಬಂದರಿನಿಂದ ನೆದರ್ಲೆಂಡ್‌ಗೆ ಬಂದರಿಂದ ಶೆಲ್‌ ಕಂಪೆನಿಯ ವೈಮಾನಿಕ ಇಂಧನ ವನ್ನು ಹೊತ್ತೊಯ್ಯುತ್ತಿದ್ದತೈಲ ಸಾಗಾಟ ಹಡಗಿನ ಮೇಲೆ ಯೆಮೆನ್‌ ಸಮೀಪ ಹೌತಿ ಬಂಡುಕೋರರು ಕ್ಷಿಪಣಿ ದಾಳಿ ನಡೆಸಿದ್ದಾರೆ.

    ಅದೃಷ್ಟವಶಾತ್‌  ಗುರಿ ತಪ್ಪಿದ ಪರಿಣಾಮ ಹಡಗಿಗೆ ಯಾವುದೇ ಅಪಾಯವಾಗಿಲ್ಲ ಮತ್ತು ಹಡಗು-ಸಿಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ. ಎಂಆರ್‌ಪಿಎಲ್‌ನಲ್ಲಿ ಉತ್ಪಾದನೆಯಾದ ವೈಮಾನಿಕ ಇಂಧನವನ್ನು ಶೆಲ್‌ ಕಂಪೆನಿಯು ಖರೀದಿಸಿ ನೆದರ್ಲೆಂಡ್‌ಗೆ ಸಾಗಾಟ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಡಿ. 11ರಂದು ರಾತ್ರಿ ಯೆಮೆನ್‌ನ ಬಂಡುಕೋರರ ಆಡಳಿತವಿರುವ ಬಾಬ್‌ ಎಲ್‌-ಮಂಡೆಬ್‌ ಕೊಲ್ಲಿಯಲ್ಲಿ ಈ ಕ್ಷಿಪಣಿ ದಾಳಿ ನಡೆದಿದೆ. ಮಂಗಳೂರಿನಿಂದ ವಿವಿಧ ಕಂಪೆನಿಗಳ ಸರಕು ತುಂಬಿದ ಹಡಗುಗಳು ನಿತ್ಯ ಸಂಚರಿಸುತ್ತವೆ. ಈ ಪೈಕಿ ಬಹುತೇಕ ಹಡಗುಗಳು ತಲುಪಲಿರುವ ಕೊನೆಯ ನಿಲ್ದಾಣದ ಬಗ್ಗೆ ಇಲ್ಲಿ ಮಾಹಿತಿ ಇರುವುದಿಲ್ಲ. ಯಾಕೆಂದರೆ ಆ ಹಡಗುಗಳು ವಯಾ ದೇಶ-ವಿದೇಶದ ಇತರ ಬಂದರಿಗೆ ಹೋಗಿ ಅಲ್ಲಿಂದ ಸರಕು ತುಂಬಿಸಿಕೊಂಡು ಇತರ ಕಡೆಗೆ ಹೋಗುತ್ತವೆ. ಹೀಗಾಗಿ ಯೆಮೆನ್‌ ಸಮೀಪ ಗುರಿ ತಪ್ಪಿದ ಕ್ಷಿಪಣಿ ದಾಳಿಗೆ ಒಳಗಾದ ಹಡಗಿನ ವಿವರ ನಿರೀಕ್ಷಿಸಲಾಗುತ್ತಿದೆ ಎಂದು ನವ ಮಂಗಳೂರು ಬಂದರು ಪ್ರಾಧಿಕಾರ ಹೇಳಿದೆ

    Post Views: 261

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.