Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವತಿ ನಾಪತ್ತೆ – ಪಬ್ಜಿ ಸಹವಾಸ ಕಾರಣ..?
    ಇತ್ತೀಚಿನ ಸುದ್ದಿ

    ಮಂಗಳೂರು: ಯುವತಿ ನಾಪತ್ತೆ – ಪಬ್ಜಿ ಸಹವಾಸ ಕಾರಣ..?

    August 1, 2024
    Share

    ಮಂಗಳೂರು: ಪಬ್‌ಜಿ ಆನ್‌ಲೈನ್ ಆಟವಾಡುವ ಹವ್ಯಾಸವಿದ್ದ ನಗರದ ಬಿಜೈ ನಿವಾಸಿ ಯುವತಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಕೆಲಿಸ್ತಾ ಫೆರಾವೊ (18) ನಾಪತ್ತೆಯಾದ ಯುವತಿ. ಎಸ್ಎಸ್ಎಲ್‌ಸಿ ಮುಗಿಸಿದ ಬಳಿಕ ಕೆಲಿಸ್ತಾ ಫೆರಾವೊ ಆಟೊಮೊಬೈಲ್ ಕೋರ್ಸ್‌ಗೆ ಸೇರ್ಪಡೆಗೊಂಡಿದ್ದಳು. ಈಕೆಗೆ ಮೊಬೈಲ್‌‌ನಲ್ಲಿ ಪಬ್ಜಿ ಆಟವಾಡುವ ಹುಚ್ಚು ಅಂಟಿಕೊಂಡಿತ್ತು. ಮಂಗಳವಾರ ಮಧ್ಯಾಹ್ನ 12.15ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದಳು. ಈ ವಿಚಾರ ಮನೆಯವರ ಗಮನಕ್ಕೆ ಬಂದ ತಕ್ಷಣ ಹುಡುಕಾಟ ಆರಂಭಿಸಿದ್ದಾರೆ. ಸಿಸಿ ಕ್ಯಾಮರಾದಲ್ಲಿ ಪರಿಶೀಲಿಸಿದಾಗ ಆಕೆ ಆಟೋರಿಕ್ಷಾದಲ್ಲಿ ಹೋಗುತ್ತಿರುವ ದೃಶ್ಯ ದಾಖಲಾಗಿತ್ತು. ಈಕೆಗೆ 9ನೇ ತರಗತಿಯಿಂದಲೇ ಪಬ್‌ಜಿ ಆಡುತ್ತಿದ್ದಳು. ಶಾಲೆಯಿಂದ ಮನೆಗೆ ಬಂದ ತಕ್ಷಣ ವೈಫೈ ಬಳಸಿ ಮೊಬೈಲ್‌ನಲ್ಲಿ ಪಬ್‌ಜಿ ಆಡುತ್ತಿದ್ದಳು.

    ಈ ಬಗ್ಗೆ ಹೆತ್ತವರು ಹಲವಾರು ಬಾರಿ ಎಚ್ಚರಿಕೆ ನೀಡಿದ್ದರು. ಇದೇ ವಿಚಾರವಾಗಿ ಹಿಂದೊಮ್ಮೆ ಗಲಾಟೆ ಕೂಡ ನಡೆದಿತ್ತು. ಇತ್ತೀಚೆಗೆ ಮನೆಯವರು ಈಕೆಗೆ ಮೊಬೈಲ್ ಕೊಡಲು ನಿರ್ಧರಿಸಿ ಸಿಮ್ ಖರೀದಿಸಿದ್ದರು ಎಂದು ತಿಳಿದುಬಂದಿದೆ. ಕೆಲಿಸ್ತಾ ಕನ್ನಡ, ತುಳು, ಇಂಗ್ಲಿಷ್, ಕೊಂಕಣಿ ಭಾಷೆಗಳನ್ನು ಮಾತನಾಡುತ್ತಾಳೆ. ಬಿಳಿ ಟಾಪ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಧರಿಸಿದ್ದಳು. ಈಕೆಯ ಬಗ್ಗೆ ಮಾಹಿತಿ ದೊರೆತವರು ಬರ್ಕೆ ಪೊಲೀಸ್ ಠಾಣೆ (0824-2220522) ಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

    Post Views: 198

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.