ಮಂಗಳೂರು: ನಗರದ ಕೊಡಿಯಾಲ್‌ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇತ್ತೀಚೆಗೆ ಗಾಂಜಾ, ಖೈದಿಗಳ ನಡುವೆ ಹೊಡೆದಾಟ ಇತ್ಯಾದಿ ಪ್ರಕರಣಗಳು ನಡೆದಿದೆ.
ಈ ಬೆನ್ನಲ್ಲೇ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿದೆ.
ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕಾರ್ಯ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ.
ಮಹಜರು ನಡೆಸಿ ನಿಷೇಧಿತ ಸೊತ್ತುಗಳನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.




