ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ. ಮಂಡ್ಯದ ಗೆಜ್ಜಲಗೆರೆಯಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಸಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಭಾಷಣ ಆರಂಭಿಸಿದ್ದಾರೆ.
ತಾಯಿ ಭುವನೇಶ್ವರಿಗೆ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿಮ್ಮ ಪ್ರೀತಿಯ ಋಣವನ್ನು ಬಡ್ಡಿ ಸಮೇತ ನಮ್ಮ ಸರ್ಕಾರ ತೀರಿಸಲಿದೆ. ಕೆಲವು ದಿನಗಳಿಂದ ಎಕ್ಸ್ ಪ್ರೆಸ್ ಹೈವೇ ಬಗ್ಗೆ ಸಾಕಷ್ಟ ಚರ್ಚೆ ನಡೆಯುತ್ತಿತ್ತು. ಸಾಮಾಜಿಕ ಜಾಲತಾಣದಲ್ಲಿ ದಶಪಥ ಹೆದ್ದಾರಿ ಬಗ್ಗೆ ಚರ್ಚೆ ನಡೆಯುತ್ತಿದ್ದವು. ಮೈಸೂರು- ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಫೋಟೋಗಳು ವೈರಲ್ ಆಗಿದೆ. ಮೈಸೂರು-ಕುಶಾಲನಗರ 4 ಪಥದ ರಸ್ತೆಗೆ ಶಿಲಾನ್ಯಾಸ ನೆರೆವೇರಿಸಿದ್ದೇವೆ ಎಂದರು.
ಇನ್ನು ದಶಪಥ ಹೆದ್ದಾರಿಯಿಂದ ಈ ಭಾಗದಲ್ಲಿ ಸಾಕಷ್ಟು ಅನುಕೂಲವಾಗಲಿದೆ. ಈ ಪುಣ್ಯ ಭೂಮಿಯಲ್ಲಿ ಒಡೆಯರ್ , ವಿಶ್ವೇಶ್ವರಯ್ಯರನ್ನು ದೇಶಕ್ಕೆ ನೀಡಿದೆ. ಭಾರತ ಇಂದು ಸಾಕಷ್ಟು ಬದಲಾವಣೆ ಆಗುತ್ತಿದೆ. ಭಾರತ ಮಾಲಾ, ಸಾಗರ ಮಾಲಾ ಯೋಜನೆಯಿಂದ ದೇಶ ಅಭಿವೃದ್ಧಿಯತ್ತ ಸಾಗಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಬದಲಾವಣೆಯಾಗಿದೆ. ಕಳೆದ ಕೆಲವು ವರ್ಷದಲ್ಲಿ ಇಂದು ಲಕ್ಷ ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಲಾಗಿದೆ. ಇನ್ನು ಉದ್ಯೋಗ ಸೃಷ್ಟಿ, ಮೂಲಸೌಕರ್ಯ ಅಭಿವೃದ್ಧಿಗೆ ನಾಂದಿಯಾಗಿದೆ ಎಂದರು.