Facebook Twitter Instagram
    Tuesday, March 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಬಂಟ್ವಾಳ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

    March 17, 2026
    Share

    ಬಂಟ್ವಾಳ: ಸುಮಾರು ಎಂಟು ವರ್ಷಗಳಿಂದ ಪೊಲೀಸರಿಗೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 166/2017 ರ ಪ್ರಕರಣಕ್ಕೆ ಸಂಬಂಧಿಸಿ, ಐಪಿಸಿ ಕಲಂ 379 ಹಾಗೂ 34 ಅಡಿ ಆರೋಪಿಯಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ಮೊಹಮ್ಮದ್ ಅನಾಸ್ (38) ಎಂಬಾತನು ಹಲವು ವರ್ಷಗಳಿಂದ ಪೊಲೀಸರಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದನು.

    ಪೊಲೀಸರ ಮಾಹಿತಿ ಸಂಗ್ರಹದ ಆಧಾರದ ಮೇಲೆ ದಿನಾಂಕ 16-03-2026 ರಂದು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಕೃಷ್ಣಕಾಂತ ಕೆ ಅವರ ನೇತೃತ್ವದಲ್ಲಿ ಹೆಡ್ ಕಾನ್ಸ್‌ಟೇಬಲ್ 314 ಸಂತೋಷ್ ಹಾಗೂ ಪಿಸಿ 2462 ಶಿವಾನಂದ ಮಡ್ಡಿ ಅವರು ತಮಿಳುನಾಡಿನ ಕೊಯಂಬತ್ತೂರು ಜಿಲ್ಲೆಯ ಪೊಳಚಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 10

    Related Posts

    ಮಂಗಳೂರಿನ ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

    March 17, 2026

    ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ : ಸಿಎಂ ಸೂಚನೆ ಮೇರೆಗೆ ಸಸ್ಪೆಂಡ್

    March 16, 2026

    ಉಡುಪಿ: LPG ಗ್ಯಾಸ್ ಸಾಗಾಟ ನಡೆಸುತ್ತಿದ್ದ ಟ್ಯಾಂಕ‌ರ್ ಪಲ್ಟಿ

    March 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.