Facebook Twitter Instagram
    Wednesday, September 30
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಳಿ ₹1.60 ಲಕ್ಷ ಮೌಲ್ಯ ಮಾದಕ ವಸ್ತು!! ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಳಿ ₹1.60 ಲಕ್ಷ ಮೌಲ್ಯ ಮಾದಕ ವಸ್ತು!! ಆರೋಪಿ ಅರೆಸ್ಟ್

    September 30, 2026
    Share

    ಮಂಗಳೂರು: ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು, ಆತನ ಬಳಿಯಿದ್ದ ಸುಮಾರು 16 ಗ್ರಾಂ ತೂಕದ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಸೆಪ್ಟೆಂಬರ್ 29ರಂದು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ನಿಂತಿರುವುದನ್ನು ಗಮನಿಸಿದ ಕಾವೂರು ಠಾಣೆ ಪೊಲೀಸರು ಆತನನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ಉಳ್ಳಾಲದ ಅಜ್ಜಿನಡ್ಕ ಗ್ರಾಮದ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ. (26) ಎಂಬುದು ತಿಳಿದುಬಂದಿದೆ

    ಆತನ ವಶದಲ್ಲಿದ್ದ ಸುಮಾರು 16 ಗ್ರಾಂ ತೂಕದ ಮಾದಕ ವಸ್ತುವನ್ನು ಕಾನೂನುಬದ್ಧವಾಗಿ ವಶಪಡಿಸಿಕೊಳ್ಳಲಾಗಿದ್ದು, ಇದರ ಅಂದಾಜು ಮೌಲ್ಯ ಸುಮಾರು ₹1.60 ಲಕ್ಷ ಎಂದು ಪೊಲೀಸರು ತಿಳಿಸಿದ್ದಾರೆ.

    ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 128/2026ರಂತೆ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

    ಆರೋಪಿಯ ವಿರುದ್ಧ ಈ ಹಿಂದೆ ದಾಖಲಾಗಿದ್ದ ಪ್ರಕರಣಗಳು:

    ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 02/2020ರಂತೆ ರಾತ್ರಿ ಕಳ್ಳತನ ಪ್ರಕರಣ.
    ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 79/2020ರಂತೆ ರಾತ್ರಿ ಕಳ್ಳತನ ಪ್ರಕರಣ.
    ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 25/2024ರಂತೆ ಗಾಂಜಾ ಸೇವನೆ ಪ್ರಕರಣ.

    Post Views: 12

    Related Posts

    ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲರಾದ ಪ್ರಸಾದ್ ವಿರುದ್ದ ದೂರು ದಾಖಲು

    September 30, 2026

    ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ-ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಸಾವು

    September 30, 2026

    ಮಂಗಳೂರು: ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಯುವಕ ಅರೆಸ್ಟ್ : ಮಾದಕ ಸೇವನೆ ದೃಢ

    September 29, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನ್ಯಾಯಾಲಯದ ಪ್ರಕ್ರಿಯೆ ಕುರಿತು ಸುಳ್ಳು ಮಾಹಿತಿ ಆರೋಪ: ವಕೀಲರಾದ ಪ್ರಸಾದ್ ವಿರುದ್ದ ದೂರು ದಾಖಲು

    September 30, 2026

    ಮಂಗಳೂರು: ಅನುಮಾನಾಸ್ಪದವಾಗಿ ನಿಂತಿದ್ದ ವ್ಯಕ್ತಿಯ ಬಳಿ ₹1.60 ಲಕ್ಷ ಮೌಲ್ಯ ಮಾದಕ ವಸ್ತು!! ಆರೋಪಿ ಅರೆಸ್ಟ್

    September 30, 2026

    ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ-ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಸಾವು

    September 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.