Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 1 ವರ್ಷ ಸಜೆ, 10 ಸಾವಿರ ರೂ. ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು : ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಅಪರಾಧಿಗೆ 1 ವರ್ಷ ಸಜೆ, 10 ಸಾವಿರ ರೂ. ದಂಡ

    February 12, 2025
    Share

    ಮಂಗಳೂರು: ಐಟಿಐ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ-ಎಫ್‌ಟಿಎಸ್‌ಸಿ-1) ಅಪರಾಧಿಗೆ 1 ವರ್ಷ ಸಾದಾ ಜೈಲು ಮತ್ತು 10ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

    ಸಜಿಪನಡು ಕಂಚಿನಡ್ಕ ನಿವಾಸಿ ಜಮಾಲ್‌ (24) ಶಿಕ್ಷೆಗೊಳಗಾದಾತ.

    ಜಮಾಲ್‌ ಬೆಳ್ತಂಗಡಿಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡುತ್ತಿದ್ದ. 2024ರ ಅ. 5ರಂದು ವಿದ್ಯಾರ್ಥಿನಿ ಬೆಳ್ತಂಗಡಿಯ ಐಟಿಐ ಕಾಲೇಜೊಂದಕ್ಕೆ ತನ್ನ ಸಂಬಂಧಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಅ. 10ರಂದು ಬೆಳಗ್ಗೆ 7.45ರ ಸುಮಾರಿಗೆ ಮತ್ತೆ ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಬಂದ ಆತ ಅಪ್ರಾಪ್ತ ವಯಸ್ಸಿನ ಬಾಲಕಿ ಸೇರಿದಂತೆ ಇಬ್ಬರಿಗೂ ಬೈಕ್‌ ತಾಗಿಸಿಕೊಂಡು ಚಲಾಯಿಸಿದ್ದಾನೆ. “ನಿನ್ನನ್ನು ಕಾಲೇಜು ವರೆಗೆ ಬಿಡಬೇಕಾ? ನಿನ್ನ ಮೊಬೈಲ್‌ ನಂಬರ್‌ ನನಗೆ ಕೊಡು’ ಎಂದು ಕೇಳಿದ್ದಾನೆ. ಅ. 15ರಂದು ಬೆಳಗ್ಗೆ 7.45ಕ್ಕೆ ಮತ್ತೆ ಬೈಕ್‌ನಲ್ಲಿ ಬಂದು ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ.

    ವಿದ್ಯಾರ್ಥಿನಿ ನೀಡಿದ ದೂರಿನಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 12ರಡಿ ಪೋಕ್ಸೋ ಮತ್ತು ಬಿಎನ್‌ಎಸ್‌ 78ರಡಿ ಕೇಸು ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ವೇಣೂರು ಪೊಲೀಸ್‌ ಠಾಣೆಯ ಪಿಎಸ್‌ಐ ಶ್ರೀಶೈಲ ಟಿ. ಮುರಗೋಡು ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

    ಸಮಗ್ರ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ (ಪೋಕ್ಸೋ -ಎಫ್‌ಟಿಎಸ್‌ಸಿ-1) ದ ನ್ಯಾಯಾಧೀಶರಾದ ವಿನಯ್‌ ದೇವರಾಜ್‌ ಅವರು ಜಮಾಲ್‌ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆತನಿಗೆ 1 ವರ್ಷ ಸಾದಾ ಸಜೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಹೆಚ್ಚುವರಿ 2 ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಬೇಕು. ಸಂತ್ರಸ್ತ ವಿದ್ಯಾರ್ಥಿನಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 1 ಲಕ್ಷ ರೂ. ಪರಿಹಾರ ನೀಡಬೇಕೆಂದು ನ್ಯಾಯಾಲಯ ನಿರ್ದೇಶನ ನೀಡಿದೆ.

    ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕರಾದ ಸಹನಾದೇವಿ ಬೋಳೂರು ವಾದಿಸಿದ್ದರು.

    ಬಿಎನ್‌ಎಸ್‌ನಡಿ ಮೊದಲ ಪೋಕ್ಸೋ ತೀರ್ಪು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಕಾನೂನು 2024ರ ಜುಲೈ 1ರಿಂದ ಜಾರಿಗೆ ಬಂದಿದ್ದು, ಈ ಕಾನೂನಿನಡಿ ನೊಂದಣಿಯಾದ ಪೋಕ್ಸೋ ಪ್ರಕರಣದ ಮೊದಲ ತೀರ್ಪು ಪ್ರಕರಣ ಇದಾಗಿದೆ. 2024ರ ಅ. 15ರಂದು ಪ್ರಕರಣ ದಾಖಲಾಗಿದ್ದರೆ, 2025ರ ಫೆ. 10ರಂದು ತೀರ್ಪು ಹೊರಬಿದ್ದಿದೆ. ಕೇವಲ ಮೂರೂವರೆ ತಿಂಗಳ ಅವಧಿಯಲ್ಲಿ ಪೋಕ್ಸೋ ನ್ಯಾಯಾಲಯ ಬಿಎನ್‌ಎಸ್‌ 78ರಡಿ ತೀರ್ಪು ನೀಡಿದೆ.

    Post Views: 272

    Related Posts

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಅಕ್ರಮ ಮರಳು ಸಾಗಾಣಿಕೆ ವೇಳೆ ಪೊಲೀಸ್ ದಾಳಿ: ನದಿಗೆ ಜಿಗಿದಿದ್ದ ಯುವಕ ಸಾವು..!!

    September 10, 2026

    ಮಂಗಳೂರು: ಲೇಡಿಗೋಷನ್ ಆಸ್ಪತ್ರೆಗೆ ಬೆಸ್ಟ್ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜಲ ಶುದ್ದೀಕರಣ ಉಪಕರಣ ಕೊಡುಗೆ

    September 10, 2026

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.