Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಗೆ – ಆರೋಪಿ ಸೆರೆ
    ಇತ್ತೀಚಿನ ಸುದ್ದಿ

    ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಗೆ – ಆರೋಪಿ ಸೆರೆ

    March 2, 2025
    Share

    ಮಂಗಳೂರು : ಅಶ್ಲೀಲ ವೀಡಿಯೊ ಇರುವುದಾಗಿ ಯುವತಿಯರನ್ನು ಬೆದರಿಸಿ ಹಣ ಸುಲಿಯುತ್ತಿದ್ದ ಕಾರ್ಕಳದ ಈದು ಗ್ರಾಮದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಈದು ಗ್ರಾಮದ ಸತೀಶ್‌ ಹೊಸ್ಮಾರು (36) ಎಂದು ಗುರುತಿಸಲಾಗಿದೆ.ಈತ ಸೋಷಿಯಲ್‌ ಮೀಡಿಯಾದ ಮೂಲಕ ಯುವತಿಯರ ಮತ್ತು ಮಹಿಳೆಯರ ಮೊಬೈಲ್‌ ನಂಬರ್‌ ಸಂಪಾದಿಸಿ ಫೋನ್‌ ಮಾಡಿ ನಿಮ್ಮ ಅಶ್ಲೀಲ ವೀಡಿಯೊ ಇದೆ, ಹಣ ಕೊಡದಿದ್ದರೆ ಅದನ್ನು ಸೋಷಿಯಲ್‌ ಮೀಡಿಯಾದಲ್ಲಿ ಅಪ್‌ಲೋಡ್‌ ಮಾಡುತ್ತೇನೆ ಎಂದು ಬೆದರಿಸುತ್ತಿದ್ದ. ಈ ರೀತಿ ಹಲವು ಯುವತಿಯರಿಂದ ಹಣ ಸುಲಿಗೆ ಮಾಡಿದ್ದಾನೆ. ಮಂಗಳೂರಿನ ಓರ್ವ ಮಹಿಳೆ ನೀಡಿದ ದೂರಿನ ಪ್ರಕಾರ ಕದ್ರಿ ಪೊಲೀಸರು ಅವನನ್ನು ಬಂಧಿಸಿದ್ದಾರೆ.ಇನ್‌ಸ್ಟಾಗ್ರಾಂ, ಫೇಸ್‌ಬುಕ್‌ ಮತ್ತಿತರ ಸೋಷಿಯಲ್‌ ಮೀಡಿಯಾಗಳಿಂದ ಮಹಿಳೆಯರ ಮೊಬೈಲ್‌ ನಂಬರ್‌ಗಳನ್ನು ಪಡೆದುಕೊಂಡು ವೀಡಿಯೊ ಇದೆ ಎಂದು ಬೆದರಿಕೆ ಕರೆಗಳನ್ನು ಮಾಡುತ್ತಿದ್ದ. ಮಂಗಳೂರಿನ ಮಹಿಳೆ ನೀಡಿದ ದೂರಿನಂತೆ ಅವನನ್ನು ಬಂಧಿಸಿ ಮೊಬೈಲ್‌ ಪರಿಶೀಲಿಸಿದಾಗ ಅದರಲ್ಲಿ ಅನೇಕ ಯುವತಿಯರ ನಂಬರ್‌ ಸಿಕ್ಕಿದೆ. ಈತನ ವಿರುದ್ಧ ಕಾರ್ಕಳ ನಗರ ಮತ್ತು ಗ್ರಾಮಾಂತರ ಠಾಣೆಗಳಲ್ಲಿ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಜೈಲಿಗೂ ಹೋಗಿ ಬಂದಿದ್ದ. ಜೈಲಿನಿಂದ ಬಂದ ಬಳಿಕ ತನ್ನ ಹಳೇ ಚಾಳಿ ಮುಂದುವರಿಸಿದ್ದ.

    Post Views: 228

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.