Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕಳೆದು ಹೋಗಿದ್ದ ಮೊಬೈಲ್ ಬಳಸಿ ಹಣ ವರ್ಗಾಯಿಸಿ ವಂಚನೆ..!
    ಇತ್ತೀಚಿನ ಸುದ್ದಿ

    ಮಂಗಳೂರು: ಕಳೆದು ಹೋಗಿದ್ದ ಮೊಬೈಲ್ ಬಳಸಿ ಹಣ ವರ್ಗಾಯಿಸಿ ವಂಚನೆ..!

    December 17, 2023
    Share

    ಮಂಗಳೂರು : ವ್ಯಕ್ತಿಯೋರ್ವರು ಕಳೆದುಕೊಂಡಿದ್ದ ಮೊಬೈಲ್ ನ್ನು ಬಳಸಿ ಇನ್ನೋರ್ವ ವ್ಯಕ್ತಿ ಫೋನ್ ಪೇ ಮೂಲಕ ಹಣ ವರ್ಗಾಯಿಸಿ ವಂಚಿಸಿದ್ದಾನೆ. ದೂರುದಾರರು ಡಿಸೆಂಬರ್ 3ರಂದು ಕಣ್ಣೂರಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎರಡು ಮೊಬೈಲ್ ಹ್ಯಾಂಡ್ ಸೆಟ್ ಗಳನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಮರುದಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ ಎರಡು ದಿನಗಳ ಅನಂತರ ಒಂದು ಮೊಬೈಲ್‌ ಸಿಮ್ ಆನ್ ಆಗಿತ್ತು. ಅದಕ್ಕೆ ಸಂಬಂಧಿಕರ ಪೋನ್ ಮೂಲಕ ಸಂಪರ್ಕಿಸಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿ ಮಂಗಳೂರಿನ ಪಡೀಲ್‌ನಲ್ಲಿ ಮೊಬೈಲ್ ಫೋನ್ ಸಿಕ್ಕಿದ್ದು ತಾನು ಕಡಬದಲ್ಲಿದ್ದೇನೆ ಎಂದು ತಿಳಿಸಿದ್ದಾನೆ. ಮಾತ್ರವಲ್ಲದೆ ನಾಲ್ಕು ದಿನ ಕಳೆದು ಮಂಗಳೂರಿಗೆ ಬಂದು ಮೊಬೈಲ್ ತಂದುಕೊಡುವುದಾಗಿಯೂ ಹೇಳಿದ್ದ. ಆದರೆ ಆತ ತಂದುಕೊಡಲಿಲ್ಲ. ಹಾಗಾಗಿ ದೂರುದಾರರು ಡಿಸೆಂಬರ್ 12ರಂದು ತನ್ನ ಹಳೆಯ ನಂಬರ್‌ನ ಮೊಬೈಲ್ ಸಿಮ್ ಅನ್ನು ಬ್ಲಾಕ್ ಮಾಡಿ ಹೊಸ ಸಿಮ್ ಖರೀದಿಸಿದ್ದರು. ಆರೋಪಿಗಳು ಡಿಸೆಂಬರ್ 12ರಂದು ದೂರುದಾರರ ಮೊಬೈಲ್‌ನ ಫೋನ್ ಪೇ ಮೂಲಕ 1.82 ಲ.ರೂ.ಗಳನ್ನು ಬೇರೆ ಬೇರೆ ಖಾತೆಗೆ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 141

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.