ಕಾಸರಗೋಡು: ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಮೂಲದ ಜಯಶೀಲ ಪುಟ್ಟಣ್ಣ ಶೆಟ್ಟಿ(52) ಎಂಬಾತನನ್ನು ಬಂಧಿಸಲಾಗಿದೆ.
ವಾಹನ ತಪಾಸಣೆ ಮಾಡುತ್ತಿದ್ದ ಅಬಕಾರಿ ಸಿಬ್ಬಂದಿಗಳು ಈತನ ಬ್ಯಾಗನ್ನು ಪರಿಶೀಲಿಸಿದಾಗ ನಗದು ಪತ್ತೆಯಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಹಣ ಸಾಗಾಟ ನಡೆದಿತ್ತು. ಈ ಬಗ್ಗೆ ವಿಚಾರಣೆ ನಡೆಯುತ್ತಿದ್ದು, ಈ ಹಣ ಯಾರಿಂದ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.




