Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ
    ಇತ್ತೀಚಿನ ಸುದ್ದಿ

    ಪಿ ಎ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ

    April 6, 2026
    Share

    ಮಂಗಳೂರು: ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾ ಯೋಜನೆ, ಪಿ ಎ ಪ್ರಥಮ ದರ್ಜೆ ಕಾಲೇಜು ನಡುಪದವು ಇವರ ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವಿನಲ್ಲಿ “ನನ್ನ ಭಾರತಕ್ಕಾಗಿ ಯುವ ಜನತೆ ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ” ಎಂಬ ಧ್ಯೇಯ ವಾಕ್ಯದಡಿಯಲ್ಲಿ ನಡೆಯಲಿರುವ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ 2025-26ಕ್ಕೆ ಎಪ್ರಿಲ್ 4, 2026ರಂದು ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಡಾ. ಶೇಷಪ್ಪ ಕೆ. ಅಮೀನ್ ಕಾರ್ಯಕ್ರಮ ಸಂಯೋಜನಾಧಿಕಾರಿ, ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ, ಉದ್ಘಾಟಿಸಿ ಶುಭಹಾರೈಸಿದರು. ಪಿ ಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಸರ್ಫ್ರಾಜ್ ಜೆ ಹಾಸಿಂ ಅಧ್ಯಕ್ಷತೆ ವಹಿಸಿದ್ದರು.

    ಡಾ. ಇಕ್ಬಾಲ್, ನಿರ್ದೇಶಕರು, ದೈಹಿಕ ಶಿಕ್ಷಣ ವಿಭಾಗ, ಪಿ. ಎ. ಕಾಲೇಜ್ ಆಫ್ ಇಂಜಿನಿಯರಿಂಗ್, ಶ್ರೀ ಸತ್ಯನಾರಾಯಣ ಭಟ್ ಎಡಂಬಳೆ, ಪ್ರಗತಿಪರ ಕೃಷಿಕರು, ಮೊಂಟೆಪದವು, ಶ್ರೀಮತಿ ಪ್ರಮೀಳಾ ಕೆ. ಬಿ., ಮುಖ್ಯೋಪಾಧ್ಯಾಯರು ಕರ್ನಾಟಕ ಪಬ್ಲಿಕ್ ಸ್ಕೂಲ್, ಮೊಂಟೆಪದವು, ಜ। ಮಹಮ್ಮದ್‌ ಹನೀಫ್ ಚಂದಹಿತ್ಲು, ಅಧ್ಯಕ್ಷರು, ಶಾಲಾ ಅಭಿವೃದ್ಧಿ ಸಮಿತಿ, ಪ್ರಾಥಮಿಕ ವಿಭಾಗ, ಕೆ.ಪಿ.ಎಸ್. ಮೊಂಟೆಪದವು, ಶ್ರೀಮತಿ ಶೈಲಜಾ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು, ಗ್ರಾಮ ಪಂಚಾಯತ್ ನರಿಂಗಾನ, ಶ್ರೀಮತಿ ನಳಿನಿ , ಕಾರ್ಯದರ್ಶಿ, ಗ್ರಾಮ ಪಂಚಾಯತ್ ನರಿಂಗಾನ
    ಜ। ಅಬ್ದುಲ್ ರಹಿಮಾನ್, ನಿಕಟಪೂರ್ವ ಸದಸ್ಯರು, ಗ್ರಾಮ ಪಂಚಾಯತ್ ಸದಸ್ಯರು, ನರಿಂಗಾನ, ಶ್ರೀ ಮುರಳೀಧರ ಶೆಟ್ಟಿ, ಮೋರ್ಲ, ಅಧ್ಯಕ್ಷರು, ಯುವಕ ಮಂಡಲ (ರಿ), ನರಿಂಗಾನ ಮತ್ತು ವಿವಿಧ ವಿಭಾಗದ ಮುಖ್ಯಸ್ಥರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಕುಮಾರಿ ಚೈತ್ರ ಎನ್ ವಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿಗಳಾದ ಮುಹಮ್ಮದ್ ಆಶಿಕ್ ಮತ್ತು ತಂಡದವರು ಎನ್ ಎಸ್ ಎಸ್ ಗೀತೆಯನ್ನು ನಡೆಸಿಕೊಟ್ಟರು. ಕಾಲೇಜಿನ ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಗುರುರಾಜ್ ಪಿ ಸ್ವಾಗತಿಸಿದರೆ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಕುಮಾರಿ ಖೈರುನ್ನೀಸ ವಂದಿಸಿದರು. ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಶ್ರೀಮತಿ ಮುನೀರ ಎ ಕಾರ್ಯಕ್ರಮ ನಿರೂಪಿಸಿದರು.

    Post Views: 101

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.