Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳದಲ್ಲಿ ಮಗಳನ್ನೇ ಹತ್ಯೆಗೈದ ತಾಯಿ!
    ಇತ್ತೀಚಿನ ಸುದ್ದಿ

    ಕಾರ್ಕಳದಲ್ಲಿ ಮಗಳನ್ನೇ ಹತ್ಯೆಗೈದ ತಾಯಿ!

    October 4, 2025
    Share

    ಕಾರ್ಕಳ: ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿದ್ದ ಮಗಳನ್ನು ತಾಯಿಯೇ ಹತ್ಯೆ ಮಾಡಿದ ಭೀಕರ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಳಕಿಗೆ ಬಂದಿದೆ.


    ಮೃತಳನ್ನು ಶೇಖ್ ಮುಸ್ತಫಾ ಅವರ ಮಗಳು ಶಿಫನಾಝ್ (17) ಎಂದು ಗುರುತಿಸಲಾಗಿದೆ. ಆರೋಪಿಯಾದ ತಾಯಿ ಗುಲ್ಝಾರ್ ಬಾನು (45) ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


    ಮಾಹಿತಿಯ ಪ್ರಕಾರ, ಸೆಪ್ಟೆಂಬರ್ 20ರಂದು ತಾಯಿ-ಮಗಳ ನಡುವೆ ಪ್ರೀತಿಯ ವಿಚಾರವಾಗಿ ವಾಗ್ವಾದ ಉಂಟಾಗಿತ್ತು. ಆ ವೇಳೆ ಶಿಫನಾಝ್ ತನ್ನ ಗೆಳೆಯನೊಂದಿಗೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದಳು. ಇದರಿಂದ ಆಕ್ರೋಶಗೊಂಡ ತಾಯಿ, ಮಗಳ ಬಾಯಿಗೆ ಬಟ್ಟೆ ತುರುಕಿಸಿ, ಕುತ್ತಿಗೆ ಹಿಸುಕಿಕೊಂಡು ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.


    ಘಟನೆಯ ನಂತರ, ಶಿಫನಾಝ್ನ ತಂದೆ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಮರಣೋತ್ತರ ಪರೀಕ್ಷೆಯಲ್ಲಿ ಶಿಫನಾಝ್ ಅವರನ್ನು ಕತ್ತು ಹಿಸುಕಿಕೊಂಡು ಕೊಲೆ ಮಾಡಲಾಗಿದೆ ಎಂಬುದು ಬಹಿರಂಗವಾಯಿತು. ಬಳಿಕ ಪೊಲೀಸರು ತಾಯಿಯನ್ನು ವಿಚಾರಣೆಗೊಳಪಡಿಸಿದಾಗ ಘಟನೆಯ ಸತ್ಯ ಹೊರಬಿದ್ದಿದೆ.
    ಕಾರ್ಕಳ ನಗರ ಪೊಲೀಸ್ ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ

    Post Views: 261

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.