Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ: ಸುರತ್ಕಲ್‌ನ ರೌಡಿಶೀಟರ್ ಬಂಧನ
    ಇತ್ತೀಚಿನ ಸುದ್ದಿ

    ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಸಂದೇಶ: ಸುರತ್ಕಲ್‌ನ ರೌಡಿಶೀಟರ್ ಬಂಧನ

    December 19, 2025
    Share

    ಮಂಗಳೂರು: ಇನ್‌ಸ್ಟಾಗ್ರಾಂ ಪುಟವೊಂದರಲ್ಲಿ ಪೊಲೀಸ್ ಇಲಾಖೆಯ ವಿರುದ್ಧ ಸುಳ್ಳು ಆರೋಪ ಹೊರಿಸಿ, ಪ್ರಚೋದನಕಾರಿ ಸಂದೇಶ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ನಗರ ಸಿ.ಇ.ಎನ್ (CEN) ಪೊಲೀಸರು ಬಂಧಿಸಿದ್ದಾರೆ.

    ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ. ಈತ ಈ ಹಿಂದೆ ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಳೆ ಆರೋಪಿಯಾಗಿದ್ದಾನೆ.

    ಬಂಧಿತ ಆರೋಪಿ ಅಭಿಷೇಕ್ ‘mr_a_titude’ ಎಂಬ ಹೆಸರಿನ ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಬಜ್ಪೆಯ ಹೋಟೆಲ್ ನಿಸರ್ಗದ ಫೋಟೋವನ್ನು ಹಂಚಿಕೊಂಡಿದ್ದ. ಅದರೊಂದಿಗೆ, “ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ. ಪ್ರತಿದಿನ ನಿಸರ್ಗ ಹೋಟೆಲ್‌ನಿಂದ ಬೀಫ್ ಊಟ ತರಿಸಿ ಕೊಡುತ್ತಿದ್ದಾರೆ. ರಕ್ಷಣೆ ಮಾಡಬೇಕಾದ ಇಲಾಖೆಯೇ ಅಪರಾಧಿಗಳ ಜೊತೆ ಕೈಜೋಡಿಸಿದೆ” ಎಂಬ ಆಧಾರರಹಿತ ಮತ್ತು ಪ್ರಚೋದನಕಾರಿ ಬರಹವನ್ನು ಪೋಸ್ಟ್ ಮಾಡಿದ್ದ.

    ಪೊಲೀಸ್ ಇಲಾಖೆಯ ಘನತೆಗೆ ಕುಂದು ತರುವ ಮತ್ತು ಸಾರ್ವಜನಿಕರಲ್ಲಿ ತಪ್ಪು ಸಂದೇಶ ರವಾನಿಸುವ ಈ ಕೃತ್ಯದ ವಿರುದ್ಧ ಮೇ 8ರಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಸಿ.ಇ.ಎನ್ ವಿಭಾಗದ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಅರೆಸ್ಟ್ ಮಾಡಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    ಈತನ ಮೇಲೆ ಈಗಾಗಲೇ ಗಂಭೀರ ಕ್ರಿಮಿನಲ್ ಪ್ರಕರಣಗಳಿವೆ.
    ಸುರತ್ಕಲ್ ಪೊಲೀಸ್ ಠಾಣೆ: ಕೊಲೆ, ಕೊಲೆಯತ್ನ, ದರೋಡೆ ಸೇರಿದಂತೆ 3 ಪ್ರಕರಣಗಳು.
    ಕಾಪು ಪೊಲೀಸ್ ಠಾಣೆ: ಹಲ್ಲೆಗೆ ಸಂಬಂಧಿಸಿದ 1 ಪ್ರಕರಣ ದಾಖಲಾಗಿದೆ.

    Post Views: 247

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.