Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿ ಅಪಘಾತದಿಂದ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿ ಅಪಘಾತದಿಂದ ಮೃತ್ಯು

    January 1, 2025
    Share

    ಮಂಗಳೂರು: ಉದಯೋನ್ಮುಖ ಯಕ್ಷಗಾನ ಕಲಾವಿದ, ಎಂಎಸ್‌ಡಬ್ಲ್ಯು ವಿದ್ಯಾರ್ಥಿ ಪ್ರವಿತ್ ಆಚಾರ್ಯ(21) ಎಂಬವರು ಅರ್ಕುಳದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೂಲತಃ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಸಮೀಪದ ಮೇಲಂತಬೆಟ್ಟು ಮುಂಡೂರು ನಿವಾಸಿ ಶೇಖರ ಆಚಾರ್ಯರ ಪುತ್ರರಾದ ಪ್ರವಿತ್ ಆಚಾರ್ಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಎಸ್‌ಡಬ್ಲ್ಯು ವಿದ್ಯಾರ್ಥಿ. ಕಾಲೇಜು ವ್ಯಾಸಂಗದ ಉದ್ದೇಶದಿಂದ ಮಂಗಳೂರು ಸಮೀಪ ತನ್ನ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯವಿದ್ದರು. ಪ್ರವಿತ್ ಆಚಾರ್ಯ ಪಡೀಲ್ ಅಥವಾ ಬಿ.ಸಿ.ರೋಡ್‌ನಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿ ವಿಟ್ಲಕ್ಕೆ ಕಾಲೇಜಿಗೆ ಹೋಗುತ್ತಿದ್ದರು. ಎಂದಿನಂತೆ ಮಂಗಳವಾರ ಪ್ರವಿತ್ ಸಂಜೆ ಕಾಲೇಜು ಮುಗಿಸಿ ಬಿ.ಸಿ‌.ರೋಡ್‌ನಲ್ಲಿದ್ದ ಬೈಕ್ ಹತ್ತಿ ಮಂಗಳೂರಿನತ್ತ ಬರುತ್ತಿದ್ದರು. ಅರ್ಕುಳಕ್ಕೆ ಬರುತ್ತಿದ್ದಂತೆ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ.

    ಈ ವೇಳೆ ಹಿಂಭಾಗದಿಂದ ಬರುತ್ತಿದ್ದ ಐಸ್‌ಕ್ರೀಂ ಸಾಗಾಟದ ವಾಹನ ಪ್ರವಿತ್ ತಲೆಯ ಮೇಲೆ ಹರಿದ ಪರಿಣಾಮ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹವ್ಯಾಸಿ ಯಕ್ಷಗಾನ ಕಲಾವಿದನಾಗಿರುವ ಪ್ರವಿತ್ ಆಚಾರ್ಯ, ಸಸಿಹಿತ್ಲು ಯಕ್ಷಗಾನ ಮೇಳದಲ್ಲಿ ಸ್ತ್ರೀವೇಷಧಾರಿಯಾಗಿಯೂ ಯಕ್ಷಗಾನ ಕಲಾಸಕ್ತರ ಗಮನ ಸೆಳೆಯುತ್ತಿದ್ದರು. ಉದಯೋನ್ಮುಖ ಕಲಾವಿದರಾಗಿ ರೂಪುಗೊಳ್ಳುವಾಗಲೇ ಅವರು ಇಹಲೋಕ ತ್ಯಜಿಸಿದ್ದು ಯಕ್ಷಗಾನ ಕಲಾಲೋಕಕ್ಕೆ ಅಪಾರ ನಷ್ಟವಾಗಿದೆ.

    Post Views: 227

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.