Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಆದೇಶ ಜಾರಿ
    ಇತ್ತೀಚಿನ ಸುದ್ದಿ

    ಉಡುಪಿ: ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಆದೇಶ ಜಾರಿ

    April 7, 2026
    Share

    ಉಡುಪಿ : ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ನಿರಂತರವಾಗಿ ಭಾಗಿಯಾಗಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದ ಆರೋಪಿಯ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

    ಕಾರ್ಕಳ ನಗರ ಠಾಣಾ ವ್ಯಾಪ್ತಿಯ ಮಹಮ್ಮದ್ ಫೈಜಲ್‌ (22), ತಂದೆ: ದಿ. ಸುಲೇಮಾನ್‌, ವಾಸ: ಸಾದತ್ ಕಾಟೇಜ್‌, ಬಂಗ್ಲೆಗುಡ್ಡೆ, ಕಸಬ ಗ್ರಾಮ, ಕುಕ್ಕುಂದೂರು ಪೋಸ್ಟ್‌, ಕಾರ್ಕಳ ತಾಲೂಕು, ಉಡುಪಿ ಜಿಲ್ಲೆ ಇವರ ವಿರುದ್ಧ ಪಿ.ಐ.ಟಿ. ಎನ್.ಡಿ.ಪಿ.ಎಸ್. ಕಾಯ್ದೆಯಡಿ ಬಂಧನ ಕ್ರಮ ಜರುಗಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು.

    ಪೊಲೀಸ್ ನಿರೀಕ್ಷಕರು, ಕಾರ್ಕಳ ನಗರ ಠಾಣೆಯಿಂದ ಸಲ್ಲಿಸಿದ ವರದಿಯ ಆಧಾರದಲ್ಲಿ, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಈ ಕುರಿತು ಕ್ರಮ ಕೈಗೊಂಡು, ಪೊಲೀಸ್ ಮಹಾನಿರೀಕ್ಷಕರು, ಪಶ್ಚಿಮ ವಲಯ, ಮಂಗಳೂರು ಇವರಿಗೆ ಬಂಧನ ಆದೇಶಕ್ಕಾಗಿ ಶಿಫಾರಸು ಮಾಡಿದ್ದರು.

    ಅದರ ಮೇರೆಗೆ, ಮಾನ್ಯ ಪೊಲೀಸ್ ಮಹಾನಿರೀಕ್ಷಕರು ಪ್ರಕರಣಗಳನ್ನು ಪರಿಶೀಲಿಸಿ, ದಿನಾಂಕ 07/04/2026ರಂದು ಆರೋಪಿಯ ವಿರುದ್ಧ ಬಂಧನ ಆದೇಶ ಹೊರಡಿಸಿದ್ದಾರೆ.

    ಕಾರ್ಕಳ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ದಿನಾಂಕ 07/04/2026ರಂದು ಆರೋಪಿಗೆ ಬಂಧನ ಆದೇಶ ಜಾರಿಗೊಳಿಸಿ, ಬಂಧಿತನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.

    ಬಂಧಿತನ ವಿರುದ್ಧ ಒಟ್ಟು 05 ಮಾದಕ ದ್ರವ್ಯ ಸಾಗಾಟ ಮತ್ತು ಮಾರಾಟ ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 02 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದ್ದು, 02 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದ್ದು, 01 ಪ್ರಕರಣ ತನಿಖೆಯಲ್ಲಿದೆ.

    Post Views: 62

    Related Posts

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026

    ನಿವೃತ್ತ ಪೋಸ್ಟ್ ಮಾಸ್ಟರ್‌ಗೆ 6 ಕೋಟಿ ರೂ. ಬಂಪರ್ ಲಾಟರಿ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.