ಮುಲ್ಕಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮುಲ್ಕಿ ಪೊಲೀಸರು ಇದೀಗ ಯಶಸ್ವಿಯಾಗಿದ್ದಾರೆ.
ಮಂಗಳೂರು ಉಳಾಯಿಬೆಟ್ಟುಸಾಲೆ ಮಜಲು ಮನೆ ನಿವಾಸಿ ಪ್ರದೀಪ ಪೂಜಾರಿ ಬಂಧಿತ ಆರೋಪಿ
ಆರೋಪಿ ಪ್ರದೀಪ ಪೂಜಾರಿ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆನರೆಸಿಕೊಂಡಿದ್ದನು. ಮುಲ್ಕಿ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಆರೋಪಿತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
ಈತನ ಮೇಲೆ ಈ ಹಿಂದೆ ಬರ್ಕೆ ಪೊಲೀಸ್ ಠಾಣೆ, ಪಣಂಬೂರು ಪೊಲೀಸ್ ಠಾಣೆ, ಬಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.