Facebook Twitter Instagram
    Friday, August 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುಲ್ಕಿ: ದೇವಸ್ಥಾನದ ಹುಂಡಿ ಕಳ್ಳತನ – ಆರೋಪಿ ಬಂಧನ, 2195 ರೂ. ವಶ
    ಇತ್ತೀಚಿನ ಸುದ್ದಿ

    ಮುಲ್ಕಿ: ದೇವಸ್ಥಾನದ ಹುಂಡಿ ಕಳ್ಳತನ – ಆರೋಪಿ ಬಂಧನ, 2195 ರೂ. ವಶ

    August 21, 2026
    Share

    ಮುಲ್ಕಿ: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರ ಮುಲ್ಕಿ ಪೊಲೀಸರು ಬಂಧಿಸಿ, ಕಳುವಾದ ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಆಗಸ್ಟ್ 18 ರಂದು ಮಧ್ಯರಾತ್ರಿ ಆರೋಪಿ ದೇವಸ್ಥಾನದ ಮೇಲ್ಛಾವಣಿಯ ಜಾಲರಿ ಮೂಲಕ ಒಳನುಗ್ಗಿದ್ದಾನೆ. ಸಿಸಿ ಕ್ಯಾಮರಾವನ್ನು ತಿರುಗಿಸಿ ಕಾಣಿಕೆ ಡಬ್ಬಿಯ ಬೀಗ ಮುರಿದು ಹಣ ಕಳ್ಳತನ ಮಾಡಿದ್ದನು.ಈ ಕುರಿತು ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಕೊಡಗು ಜಿಲ್ಲೆಯ, ಮಡಿಕೇರಿ ತಾಲೂಕಿನ ಸಣ್ಣಪುಲಿಕೊಟ್ಟ ಗ್ರಾಮದ ನಿವಾಸಿ ರವಿಕುಮಾರ @ರವಿ ಹೆಚ್.ಜಿ ಎಂಬಾತನನ್ನು ದಸ್ತಗಿರಿ ಮಾಡಿದ್ದಾರೆ.

    ಆರೋಪಿಯಿಂದ ಕಳವು ಮಾಡಿದ್ದ ಸುಮಾರು 2195 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮುಲ್ಕಿ ಠಾಣೆಯ ಪಿಎಸ್‌ಐ ಹಾಗೂ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.

    ಆರೋಪಿತನ ಮೇಲೆ ಈ ಕೆಳಗಿನಂತೆ ಪ್ರಕರಣ ದಾಖಲಾಗಿರುತ್ತದೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 44/2024 ಕಲಂ: 457, 380 ಐಪಿಸಿ

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 148/2024 ಕಲಂ: 457, 380 ಐಪಿಸಿ

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 365/2024 ಕಲಂ: 303(2) ಬಿ.ಎನ್‌ಎಸ್ ಜೊತೆಗೆ 86 ಕೆ.ಎಫ್. ಆಕ್ಟ್,

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 386/2024 ಕಲಂ: 303(2) ಬಿ.ಎನ್.ಎಸ್ ಜೊತೆಗೆ 86 ಕೆ.ಎಫ್. ಆಕ್ಟ್

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 354/2024 ಕಲಂ: 331(3), 305 ಬಿ.ಎನ್.ಎಸ್

    Post Views: 6

    Related Posts

    ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು

    August 21, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026

    ಬಾಳೆಹಣ್ಣಿಗೆ ರಾಸಾಯನಿಕ, ಕೃತಕ ಬಣ್ಣ ಬಳಕೆ ಆರೋಪ; ಅಧಿಕಾರಿಗಳಿಂದ ದಾಳಿ

    August 20, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು

    August 21, 2026

    ಮುಲ್ಕಿ: ದೇವಸ್ಥಾನದ ಹುಂಡಿ ಕಳ್ಳತನ – ಆರೋಪಿ ಬಂಧನ, 2195 ರೂ. ವಶ

    August 21, 2026

    ಬಂಟ್ವಾಳ: ಎರಡು ಬೈಕ್‌ಗಳಲ್ಲಿ ಬೆನ್ನಟ್ಟಿ ಬಂದು ದರೋಡೆ: ₹8 ಲಕ್ಷ ನಗದು ಕಳವು

    August 20, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.