Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ : ಗೇಟ್‌ ಮುರಿದು ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನಗೈದ ತಂಡ
    ಇತ್ತೀಚಿನ ಸುದ್ದಿ

    ಬಂಟ್ವಾಳ : ಗೇಟ್‌ ಮುರಿದು ಮನೆಯ ಬಾಗಿಲಿಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ ಕೊಲೆ ಯತ್ನಗೈದ ತಂಡ

    December 7, 2023
    Share

    ಬಂಟ್ವಾಳ: ಮನೆಯಂಗಳಕ್ಕೆ ಪ್ರವೇಶಿಸಿದ ನಾಲೈದು ಮಂದಿಯ ಗುಂಪು ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಘಟನೆ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ. ಸುಮ್ಮಿ ಯಾನೆ ಸುಮಿತ್ ಆಳ್ವ ಮತ್ತು ಸಹಚರರು ಸೇರಿ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಮಂಗಳೂರು ತಾಲೂಕು ಬಳ್ಳಾಲಭಾಗ್ ಶಿರ್ವ ವಿಸ್ತಾ ಅಪಾರ್ಟ್ ಮೆಂಟ್ ನಿವಾಸಿ ಎಂ ಚಂದ್ರ ಶೆಟ್ಟಿ ಅವರು ಬಂಟ್ವಾಳ ನಗರ ಪೊಲೀಸರಿಗೆ ದೂರು ನೀಡಿದ್ದು, ತನ್ನ ಹೆಂಡತಿಗೆ ಸಂಬಂದಿಸಿದ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಗಾಂದೋಡಿ ಎಂಬಲ್ಲಿರುವ ಮನೆಗೆ ಬುಧವಾರ ಬೆಳಗಿನ ಜಾವ ಸುಮಾರು 2 ಗಂಟೆಗೆ ಬಿ ಮೂಡ ನಿವಾಸಿ, ಆರೋಪಿ ಸುಮಿತ್ ಆಳ್ವ (45) ಎಂಬಾತ ತನ್ನ 4 ಮಂದಿ ಸಹಚರರ ಜೊತೆ ಸೇರಿ ಮಹೇಂದ್ರ ಎಕ್ಸ್ ಯು ವಿ 500 ವಾಹನದಲ್ಲಿ ಬಂದು, ಮನೆಯ ಎದುರುಗಡೆ ಅಳವಡಿಸಿದ ಕಬ್ಬಿಣ ಗೇಟ್ ಮುರಿದು ಮನೆಯಂಗಳಕ್ಕೆ ಬಂದು ಮನೆಯ ಮುಂಭಾಗಕ್ಕೆ ಪೆಟ್ರೋಲ್ ಎರಚಿ ಬೆಂಕಿ ಹೆಚ್ಚಿರುತ್ತಾರೆ. ಪರಿಣಾಮ ಮನೆಯ ಮುಂಬಾಗಿಲು ಸುಟ್ಟು ಹೋಗಿದ್ದು, ಹೊರಾಂಗಣದಲ್ಲಿದ್ದ ಕುರ್ಚಿ ಸಂಪೂರ್ಣ ಸುಟ್ಟು ಹೋಗಿರುತ್ತದೆ. ಸುಮಿತ್ ಆಳ್ವ ಬಡ್ಡಿ ದಂಧೆ ನಡೆಸುತ್ತಿದ್ದು ಈ ಹಿಂದೆ ಕಳ್ಳ ಬಟ್ಟಿ ಮತ್ತು ಜುಗಾರಿ ದಂಧೆ ನಡೆಸುತ್ತಿದ್ದ ಎಂಬ ಆರೋಪವಿದೆ ಘಟನೆಯ ಬಗ್ಗೆ ಇದೇ ಮನೆಯಲ್ಲಿ ಬಾಡಿಗೆ ವಾಸವಿರುವ ಪ್ರದೀಪ ಹಾಗೂ ಮನ್ಸೂರ್ ಎಂಬವರು ಮನೆಯ ಒಳಗಿನಿಂದ ಗಮನಿಸಿ, ಬೊಬ್ಬೆ ಹೊಡೆದು, ಚಂದ್ರ ಶೆಟ್ಟಿ ಅವರಿಗೆ ಕರೆ ಮಾಡಿ ತಿಳಿಸಿದಂತೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಅ.ಕ್ರ-143/2023 ಕಲಂ: 143, 147, 448, 427, 436, 511 307 ಜೊತೆ 149 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

    Post Views: 193

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.