ಬೆಳ್ತಂಗಡಿ ತಾಲೂಕಿನ ಉಜಿರೆಯ ವಸತಿಗೃಹದಲ್ಲಿ 2014ರ ಮಾ.1ರಂದು ನಡೆದ ಕೊಲೆ ಪ್ರಕರಣ ಸಂಬಂಧ ಆರೋಪಿಗೆ ನ್ಯಾಯಾಲಯವು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ಬಾಳಪ್ಪ ಎಂ. ಕಳ್ಕೊಳ್ಳಿ ಶಿಕ್ಷೆಗೊಳಗಾದ ಆರೋಪಿ.
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಕೊಲೆ ಪ್ರಕರಣ ಸಂಬಂಧ ಠಾಣೆಯ ನಿರೀಕ್ಷಕ ಲಿಂಗಪ್ಪ ಪೂಜಾರಿ, ಬೆಳ್ತಂಗಡಿ ಸಿಜೆ ಮತ್ತು ಎಂಎಫ್‌ಸಿ ನ್ಯಾಯಾಲಯಕ್ಕೆ ದೋಷರೋಪಾಣಾ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣದಲ್ಲಿ ಪರಿಶಿಷ್ಟ ಜಾತಿ ಮತು ಪರಿಶಿಷ್ಟ ಪಂಗಡ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿ ತನಿಖೆ ನಡೆಸಿದ ಆಗಿನ ಬಂಟ್ವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ರಾಹುಲ್ ಕುಮಾರ್ ಶಹಪುರ್ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಅವರು ಆರೋಪಿ ಬಾಳಪ್ಪ ಎಂ. ಕಳ್ಕೊಳ್ಳಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಮತ್ತು 15,000 ರೂ. ದಂಡ (ದಂಡ ಪಾವತಿಸದಿದ್ದರೆ ತಿಂಗಳು ಹೆಚ್ಚುವರಿ ಜೈಲು) ಮತ್ತು 2 ವರ್ಷಗಳ ಸರಳ ಜೈಲು ಶಿಕ್ಷೆ ಮತ್ತು 5,000 ರೂ. ದಂಡ (ಪಾವತಿಸದಿದ್ದರೆ 3 ತಿಂಗಳು ಹೆಚ್ಚುವರಿ ಜೈಲು) ತೀರ್ಪು ನೀಡಿದ್ದಾರೆ ಎಂದು ತಿಳಿದು ಬಂದಿದೆ




